ದೇಶ

ಪಶ್ಚಿಮ ಬಂಗಾಳದಲ್ಲಿ ದೀದಿ ದರ್ಬಾರ್: ಹಿಂಸೆಗೆ ತಿರುಗಿದ ಸಂಭ್ರಮಾಚರಣೆ

Lingaraj Badiger
ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಗದ್ದುಗೆ ಏರಿದೆ.
ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಟಿಎಂಸಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಈ ಸಂಭ್ರಮ ಕೆಲವು ಹಿಂಸೆಗೆ ತಿರುಗಿದೆ.
ಪಶ್ಚಿಮ ಬಂಗಾಳದ ಅಸನ್ಸೋಲ್ ನಲ್ಲಿ ಟಿಎಂಸಿ ಕಾರ್ಯಕರ್ತರು ಸಿಪಿಐ(ಎಂ) ಕಚೇರಿ ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ತೃಣಮೂಲ ಕಾಂಗ್ರೆಸ್ 294 ಕ್ಷೇತ್ರಗಳ ಪೈಕಿ 216 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸತತ ಎರಡನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.
SCROLL FOR NEXT