ಪ್ರಧಾನಿ ನರೇಂದ್ರ ಮೋದಿ ಮತ್ತು ತ.ನಾಡು ಸಿಎಂ ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು; ದೀದಿ, ಅಮ್ಮಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟಿಎಂಸಿ ಮುಖಂಡೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ..

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟಿಎಂಸಿ ಮುಖಂಡೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆ ಬೆನ್ನಲ್ಲೇ ಉಭಯ ನಾಯಕಿಯರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ದು, ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈಗಷ್ಟೇ ಜಯಲಲಿತಾ ಮತ್ತು ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ್ದು, ಚುನಾವಣಾ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇನ್ನು ಅಸ್ಸಾಂ ನಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದು, ಪಕ್ಷದ ಗೆಲುವಿಗಾಗಿ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಖಾತೆ ತೆರೆದಿದ್ದು, 1 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆಯಲ್ಲಿ ಕೇರಳ ಬಿಜೆಪಿ ಘಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video