ಸೀತಾರಾಂ ಯೆಚುರಿ 
ದೇಶ

ಕೇರಳ ಜನತೆ ಯುಡಿಎಫ್ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಮತ ಹಾಕಿದ್ದಾರೆ: ಯೆಚುರಿ

ಕೇರಳ ಜನತೆ ಯುಡಿಎಫ್ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಮತ ಹಾಕಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ..

ನವದೆಹಲಿ: ಕೇರಳ ಜನತೆ ಯುಡಿಎಫ್ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಮತ ಹಾಕಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ ಅವರು ಗುರುವಾರ ಹೇಳಿದ್ದಾರೆ.
ಕೇರಳದಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯೆಚುರಿ, ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ ಅಧಿಕಾರಕ್ಕೆ ತಂದ ಕೇರಳ ಜನತೆಯನ್ನು ಅಭಿನಂದಿಸಿದರು, ಅಲ್ಲದೆ ತಮ್ಮ ಪಕ್ಷ ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಎಂದರು.
'ಎಲ್ ಡಿಎಫ್ ಮೇಲೆ ವಿಶ್ವಾಸವಿಟ್ಟಿದ್ದಕೆ ಕೇರಳ ಜನತೆಗೆ ನಾನು ನಮಸ್ಕರಿಸುತ್ತೇನೆ ಮತ್ತು ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವ ಭರವಸೆ ನೀಡುತ್ತೇನೆ'  ಎಂದರು.
ಕೇರಳದಲ್ಲಿ ಕೋಮುವಾದಿ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಫಲಿತಾಂಶ ಉತ್ತರ ನೀಡಿದೆ ಎಂದು ಸೀತಾರಾಂ ಯೆಚುರಿ ಅವರು ಹೇಳಿದ್ದಾರೆ.
140 ಸದಸ್ಯ ಬಲವನ್ನು ಹೊಂದಿರುವ ಕೇರಳ ವಿಧಾನಸಭೆಯಲ್ಲಿ ಎಲ್ ಡಿಎಫ್ 90 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!