ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಜನತೆ ನೀಡಿರುವ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸಾಧನೆ ಮಾಡಿದ್ದು, ಅಸ್ಸಾಂನಲ್ಲಿ ಆಡಳಿತದಲ್ಲಿದ್ದರೂ ಮತ್ತೆ ಅಧಿಕಾರಕ್ಕೆ ಬರುವುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಇಂದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮುಂಬರುವ ದಿನಗಳಲ್ಲಿ ಜನತೆಯ ವಿಶ್ವಾಸ, ನಂಬಿಕೆ ಗಳಿಸಲು ಶ್ರಮಿಸುತ್ತೇವೆ. ಗೆದ್ದ ಪಕ್ಷಗಳ ಅಭ್ಯರ್ಥಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರ ಶ್ರಮವನ್ನು ಶ್ಲಾಘಿಸಿರುವ ರಾಹುಲ್ ಗಾಂಧಿ, ಚುನಾವಣೆಯಲ್ಲಿ ಪಕ್ಷಕ್ಕಾಗಿ ಸಹಸ್ರಾರು ಕಾರ್ಯಕರ್ತರ ದುಡಿದಿದ್ದಾರೆ ಅವರಿಗೆ ನಾನು ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ. ಅಂತೆಯೇ ಕಾಂಗ್ರೆಸ್ ಮೈತ್ರೀಕೂಟದ ಪಕ್ಷಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.