ನವದೆಹಲಿ: ಕೇಂದ್ರದಲ್ಲಿ ಎರಡು ವರ್ಷ ಪೂರೈಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಈಗ ವಿದ್ಯುತ್ ವಲಯದಲ್ಲಿ ಭಾರಿ ಸುಧಾರಣೆ ಮಾಡಲು ಮುಂದಾಗಿದ್ದು, 2022ರೊಳಗೆ ದೇಶದಲ್ಲಿ 1 ಲಕ್ಷ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾಸುವ ಮೂಲಕ ವಿದ್ಯುತ್ ಕೊರತೆ ನೀಗಿಸಲು ನಿರ್ಧರಿಸಿದೆ.
2019ರ ವೇಳೆಗೆ ಪ್ರತಿಯೊಬ್ಬರಿಗೂ 24x7 ವಿದ್ಯುತ್ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಪಿಯುಶ್ ಗೋಯಲ್ ಅವರು ಶುಕ್ರವಾರ ಹೇಳಿದ್ದಾರೆ.
2022ರ ವೇಳೆಗೆ 100 ಗಿಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶ ಹೊಂದಿದ್ದು, ಈ ಸಂಬಂಧ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಂಪನಿಗಳು ಭಾರತದಲ್ಲಿ ಸಮಗ್ರ ಸೋಲಾರ್ ವಿದ್ಯುತ್ ಉತ್ಪಾದನಾ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲು ಅನುಮತಿ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಲಿದೆ ಎಂದು ಅವರು ತಿಳಿಸಿದ್ದಾರೆ.