ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚಟುವಟಿಕೆಗಳನ್ನು ನಿಲ್ಲಿಸುವಂತೆ ಚೀನಾಗೆ ಭಾರತದ ಖಡಕ್ ಸೂಚನೆ

ಪಾಕ್ ಆಕ್ರಮಿತ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತಿರುವ ಚೀನಾಗೆ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚಟುವಟಿಕೆಗಳನ್ನು ನಿಲ್ಲಿಸುವಂತೆ ಚೀನಾಗೆ ಭಾರತದ ಖಡಕ್ ಸೂಚನೆ
Srinivas Rao BV
Updated On : 20 May 2016, 2:56 am

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತಿರುವ ಚೀನಾಗೆ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು ಅಲ್ಲಿ ನಡೆಸಲಾಗುತ್ತಿರುವ ಎಲ್ಲಾ ಚಟುವಟಿಕೆಗಳನ್ನು ಕೂಡಲೇ ನಿಲ್ಲಿಸಬೇಕೆಂದು ಚೀನಾಗೆ ಎಚ್ಚರಿಕೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಗಿಲ್ಗಿಟ್‌– ಬಾಲ್ಟಿಸ್ತಾನ್‌ ಒಳಗೊಂಡಂತೆ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಪಾಕಿಸ್ತಾನದಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಚೀನಾ ಸಹಕಾರ ನೀಡುತ್ತಿದೆ. ಇದನ್ನು ಭಾರತ ಸರ್ಕಾರ  ಗಂಭೀರವಾಗಿ ಪರಿಗಣಿಸಿದ್ದು ಚೀನಾದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕೂಡಲೇ ಅಲ್ಲಿ ನಡೆಸುತ್ತಿರುವ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂಬ ಸೂಚನೆ ನೀಡಲಾಗಿದೆ ಎಂದು ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement