ಕೇರಳದ ರಾಜ್ಯಪಾಲ ಪಿ ಸದಾಶಿವಂ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ ಉಮನ್ ಚಾಂಡಿ(ಚಿತ್ರ ಕೃಪೆ-ಎಎನ್ ಐ) 
ದೇಶ

ಕೇರಳ ಮುಖ್ಯಮಂತ್ರಿ ಸ್ಥಾನಕ್ಕೆ ಉಮನ್ ಚಾಂಡಿ ರಾಜಿನಾಮೆ

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ಮುಖ್ಯಮಂತ್ರಿ...

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ. 
ರಾಜ್ಯಪಾಲ ಪಿ ಸದಾಶಿವಂ ಅವರಿಗೆ ಉಮನ್ ಚಾಂಡಿ ಅವರು ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ಕೇರಳದಲ್ಲಿ 47 ಕ್ಷೇತ್ರಗಳಲ್ಲಿ ಗೆಲವು ಕಂಡ ಯುಡಿಎಫ್, ಎಲ್ ಡಿಎಫ್ ಮುಂದೆ ಪರಾಭವಗೊಂಡಿತ್ತು. 
ಕೇರಳದಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್ ಗೆ ಅಧಿಕಾರ ಸಿಕ್ಕಿದೆ. 140 ಸದಸ್ಯ ಬಲದ ವಿಧಾನಸಭೆಯಲ್ಲಿ ಎಲ್ ಡಿಎಫ್ 91 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. 
ಸೋಲಾರ್ ಹಗರಣ ಮತ್ತು ಬಾರ್ ಲಂಚ ಹಗರಣಗಳ ಆರೋಪ ಹೊತ್ತಿರುವ ಮುಖ್ಯಮಂತ್ರಿ ಉಮನ್ ಚಾಂಡಿ ಅಧಿಕಾರ ಕಳೆದುಕೊಂಡಿದ್ದಾರೆ. ಈ ಮೂಲಕ ಕರ್ನಾಟಕ ಹೊರತುಪಡಿಸಿ ಇತರ ಎಲ್ಲ ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!