ಸುಕೃತಿ ಗುಪ್ತಾ 
ದೇಶ

ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ: ದೆಹಲಿಯ ಸುಕೃತಿ ಗುಪ್ತಾ ಟಾಪರ್

ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ದೆಹಲಿಯ ಮೊಂಟ್​ಫೋರ್ಟ್ ಶಾಲೆಯ ವಿದ್ಯಾರ್ಥಿನಿ ಸುಕೃತಿ...

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ದೆಹಲಿಯ ಮೊಂಟ್​ಫೋರ್ಟ್ ಶಾಲೆಯ ವಿದ್ಯಾರ್ಥಿನಿ ಸುಕೃತಿ ಗುಪ್ತಾ ಅವರು 500 ಅಂಕಗಳಿಗೆ 497 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಿಬಿಎಸ್ ಇ ಫಲಿತಾಂಶದಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಮೊದಲ ಮೂರು ಸ್ಥಾನಗಳನ್ನು ವಿದ್ಯಾರ್ಥಿನಿಯರೇ ಪಡೆದುಕೊಂಡಿದ್ದಾರೆ. ಪಲಕ್ ಗೋಯಲ್ ದ್ವಿತೀಯ ಸ್ಥಾನ ಪಡೆದರೆ, ಸೌಮ್ಯ ಉಪ್ಪಾಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಸಿಬಿಎಸ್ಇಯಲ್ಲಿ ಒಟ್ಟಾರೆ ಶೇ.88. 58ರಷ್ಟು ಬಾಲಕಿಯರು ಹಾಗೂ ಶೇ.78.85ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ.
ಇನ್ನು ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಸುಕೃತಿ, ಕಠಿಣ ಪರಿಶ್ರಮವಿದ್ದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ನಾನು ನಂಬಿದ್ದು ಸ್ವ ಅಧ್ಯಯನವನ್ನು. ಜೊತೆಗೆ ಪರೀಕ್ಷೆಗೆ ಸಿದ್ಧಳಾಗಲು ಎನ್​ಸಿಇಆರ್​ಟಿ ಪುಸ್ತಕಗಳನ್ನು ಅನುಸರಿಸಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಫಲಿತಾಂಶಕ್ಕಿಂತ ಈ ವರ್ಷ ಶೇ. 2.38ರಷ್ಟು ಹೆಚ್ಚು ಫಲಿತಾಂಶ ಬಂದಿದೆ. ಕಳೆದ ವರ್ಷ ಶೇ. 82ರಷ್ಟು ಬಂದಿತ್ತು. ಈ ಬಾರಿ ಫಲಿತಾಂಶ 83.05ರಷ್ಟು ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!