ನವದೆಹಲಿ: ಯಾವುದೇ ಸೋಲು ಶಾಶ್ವತವಲ್ಲ. ಆದರೆ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಇಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 25ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಮೂಲ ಸಿದ್ಧಾಂತಗಳನ್ನು ಮೂಲೆಗುಂಪು ಮಾಡಿ ಗಳಿಸುವ ಜಯ ದೀರ್ಘ ಕಾಲ ಉಳಿಯುವುದಿಲ್ಲ. ಆದರೆ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ ನಿಂತರೆ, ಯಾವ ಸೋಲೂ ಶಾಶ್ವತವಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ,
ಇತ್ತೀಚಿಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಬಳಿಕ ಸಾಮಾಜಿಕ ಸಾಮರಸ್ಯದ ಬಗ್ಗೆ ಮಾತಾನಾಡಿರುವ ಕಾಂಗ್ರೆಸ್ ಅಧ್ಯಕ್ಷೆ, ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ಮೂಲಕ ರಾಜೀವ್ ಅವರ ಬಲಿದಾನವನ್ನು ಸಾರ್ಥಕಗೊಳಿಸಬೇಕು ಎಂದು ಹೇಳಿದ್ದಾರೆ.
ರಾಜೀವ್ ಗಾಂಧಿ ಅವರ ಮೌಲ್ಯಗಳನ್ನು, ಅವರ ಸರಳತೆ, ಆಧುನಿಕತೆ, ಸಾಮರಸ್ಯ ಮತ್ತು ಸೂಕ್ಷ್ಮತೆಗಳನ್ನು ನಾವು ಅನುಸರಿಸಬೇಕು ಎಂದು ಸೋನಿಯಾ ಗಾಂಧಿ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos