ಕಿರಣ್ ಬೇಡಿ 
ದೇಶ

ಪುದುಚೆರಿ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ನೇಮಕ

ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕಿ ಕಿರಣ್ ಬೇಡಿ ಅವರನ್ನು ಪುದುಚೆರಿ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕಿ ಕಿರಣ್ ಬೇಡಿ ಅವರನ್ನು ಪುದುಚೆರಿ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದು, ಕಿರಣ್ ಬೇಡಿ ಪುದುಚೆರಿ ಲೆಫ್ಟಿನೆಂಟ್ ಗೌರ್ನರ್ ಆಗಿ ಅಧಿಕಾರ ವಹಿಸಿಕೊಳ್ಳುವುದು ಅಧಿಕೃತವಾಗಿದೆ. ಕಳೆದ ವರ್ಷ ನಡೆದಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಿರಣ್ ಬೇಡಿ ಬಿಜೆಪಿ ಸೇರಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು.
ಕೇಂದ್ರದ ಆಡಳಿತ ನನ್ನ ಮೇಲೆ ನಂಬಿಕೆ ಇರಿಸಿದ್ದು ಅದರಂತೆ ಕಾರ್ಯನಿರ್ವಹಿಸಲಿದ್ದೇನೆ ಎಂದು ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ನೇಮಕಗೊಂಡಿರುವುದರ ಬಗ್ಗೆ ಕಿರಣ್ ಬೇಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಮೊದಲ ಐಪಿಎಸ್ ಅಧಿಕಾರಿಯಾಗಿ ನೇಮಕಗೊಂಡಿದ್ದ ಕಿರಣ್ ಬೇಡಿ, 1998 -99 ರ ಅವಧಿಯಲ್ಲಿ ದೆಹಲಿಯ ಮಾಜಿ ಲೆಫ್ಟಿನೆಂಟ್ ಗೌರ್ನರ್  ತೇಜಿಂದರ್ ಖನ್ನ ಅವರ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಮೇ.19 ರಂದು ಪ್ರಕಟವಾದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪುದುಚೇರಿಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿ ಅಧಿಕಾರ ಹಿಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ