ಒಂದು ವೇಳೆ ಪ್ರಿಯಾಂಕಾ ಕಾಂಗ್ರೆಸ್ ಚುಕ್ಕಾಣಿ ಹಿಡಿದ್ರೆ ಬಿಜೆಪಿಗೆ ಕಠಿಣ ಸವಾಲು: ಬಾಬಾ ರಾಮ್ ದೇವ್
ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಆಗಮಿಸಿದರೇ ಬಿಜೆಪಿಗೆ ಕಠಿಣ ಸವಾಲು ಎದುರಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ್ ಅಭಿಪ್ರಾಯ ಪಟ್ಟಿದ್ದಾರೆ....
ನವದೆಹಲಿ: ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಮುಂದಿನ ಎಲ್ಲಾ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಲಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಆಗಮಿಸಿದರೇ ಬಿಜೆಪಿಗೆ ಕಠಿಣ ಸವಾಲು ಎದುರಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ್ ಅಭಿಪ್ರಾಯ ಪಟ್ಟಿದ್ದಾರೆ.
ಆಂಗ್ಲ ಭಾಷೆಯ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿರುವ ಬಾಬಾರಾಮ್ ದೇವ್ ಪ್ರಿಯಾಂಕಾ ಶಕ್ತಿಯ ಬಗ್ಗೆ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಮುಂದಾಳತ್ವ ವಹಿಸಿದರೇ ಬಿಜೆಪಿಗೆ ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮಗೆ ಮಾಡಿರುವ ಅನ್ಯಾಯವನ್ನು ತಾನು ಯಾವತ್ತೂ ಮರೆಯುವುದಿಲ್ಲ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.