ಅಂತಾರಾಷ್ಟ್ರೀಯ ಯೋಗ ದಿನದಂದು ಯೋಗಾಭ್ಯಾಸ ಮಾಡುತ್ತಿರುವ ಮೋದಿ(ಸಂಗ್ರಹ ಚಿತ್ರ) 
ದೇಶ

ಚಂಡೀಗಢದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ, ಜೂ.21 ರಂದು ನಡೆಯಲಿರುವ ಎರಡನೇ ವರ್ಷದ ಅಂತಾರಾಷ್ಟ್ರೀಯ ದಿನವನ್ನು ಚಂಡಿಗಢದಲ್ಲಿ ಆಚರಿಸುವುದಾಗಿ ತಿಳಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಜೂ.21 ರಂದು ನಡೆಯಲಿರುವ ಎರಡನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನವನ್ನು ಚಂಡೀಗಢದಲ್ಲಿ ಆಚರಿಸುವುದಾಗಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಮಾಹಿತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಯೋಗ ದಿನದ ಅಂಗವಾಗಿ ಚಂಡೀಗಢದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಆರೋಗ್ಯದ ವಿಷಯದಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಸಮಸ್ಯೆಗೆ ಕಂಡುಕೊಳ್ಳುವ ಪರಿಹಾರಕ್ಕಿಂತ ಉತ್ತಮವಾದ ಮಾರ್ಗವಾಗಿದ್ದು ಯೋಗ ಕೇವಲ ಕಾರ್ಯಕ್ರಮವಲ್ಲ. ನಮ್ಮ ಜೀವನದಲ್ಲಿ 20 -30 ನಿಮಿಷ ಅದರಲ್ಲೇ ತೊಡಗಿಸಿಕೊಳ್ಳುವುದಕ್ಕೆ ನಮಗೆ ಪ್ರೇರಣೆ ನೀಡುತ್ತದೆ. ಬಡ ಕುಟುಂಬಗಳು ಆರೋಗ್ಯ ಸಮಸ್ಯೆಗಳಿಗಾಗಿ ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಆದರೆ ಆರೋಗ್ಯದಿಂದ ಇರುವುದಕ್ಕೆ ಯಾವುದೇ ಖರ್ಚು ಮಾಡಬೇಕಿಲ್ಲ. ಯೋಗ ಆರೋಗ್ಯವಂತರಾಗಿರುವುದಕ್ಕೆ ಸಹಕಾರಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯನ್ನು ಪರಿಗಣಿಸಿದ್ದ ವಿಶ್ವ ಸಂಸ್ಥೆ 2014 ರ ಡಿಸೆಂಬರ್ ನಲ್ಲಿ  ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ