ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

'ನೀಟ್ ಸುಗ್ರೀವಾಜ್ಞೆ' ಕುರಿತು ಕಾನೂನು ಸಲಹೆ ಕೇಳಿದ ರಾಷ್ಟ್ರಪತಿ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ...

ಪ್ರಣಬ್ ಮುಖರ್ಜಿ
Mainashree
Updated On : 22 May 2016, 9:36 am
ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್'ಅನ್ನು ಒಂದು ವರ್ಷಗಳ ಕಾಲ ಮುಂದೂಡುವುದಕ್ಕಾಗಿ ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿರುವ ಸುಗ್ರೀವಾಜ್ಞೆ ಕುರಿತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕಾನೂನು ಸಲಹೆ ಕೇಳಿದ್ದಾರೆ. 
ನೀಟ್ ಪರೀಕ್ಷೆಯನ್ನು ಒಂದು ವರ್ಷಗಳ ಕಾಲ ಮುಂದೂಡುವುದಕ್ಕಾಗಿ ಕೇಂದ್ರ ಸರ್ಕಾರ ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿ ಶನಿವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸಹಿಗಾಗಿ ಕಳುಹಿಸಿಕೊಟ್ಟಿತ್ತು. 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕುವ ಮುನ್ನ, ನೀಟ್ ಸುಗ್ರೀವಾಜ್ಞೆ ಕುರಿತು ಕಾನೂನು ಸಲಹೆ ಕೇಳಿದ್ದಾರೆ. ಪ್ರಣಬ್ ಮುಖರ್ಜಿ ಅವರಿಗೆ ಕೆಲವು ಪ್ರಶ್ನೆಗಳು ಮೂಡಿದ್ದು, ಆಂತರಿಕ ತಜ್ಞರಿಂದ ಕಾನೂನು ಸಲಹೆ ಕೇಳಿದ್ದಾರೆ. ಸುಗ್ರೀವಾಜ್ಞೆ ಕುರಿತು ತಮ್ಮಲ್ಲಿ ಮೂಡಿರುವ ಪ್ರಶ್ನೆಗಳನ್ನು ಕಾನೂನು ತಜ್ಞರಲ್ಲಿ ಕೇಳಿದ್ದಾರೆ. 

Advertisement

Advertisement

ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಈ ವರ್ಷದ ಮಟ್ಟಿಗೆ ರಾಜ್ಯ ಸರ್ಕಾರಿ ಪ್ರವೇಶ ಪರೀಕ್ಷೆ (ಸಿಇಟಿ)ಗಳಿಗೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ರೂಪಿಸಿರುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದರೆ ಕರ್ನಾಟಕ, ತಮಿಳುನಾಡು, ಕೇರಳ, ಗುಜರಾತ್ ಮಹಾರಾಷ್ಟ್ರ ಮತ್ತು ಪಂಜಾಬ್ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಸುಗ್ರೀವಾಜ್ಞೆ ಜಾರಿಯಾದರೆ ಇಲ್ಲಿಯವರೆಗೆ ನಡೆಯುತ್ತಿದ್ದಂತೆ ಸರ್ಕಾರಿ ಕಾಲೇಜುಗಳ ಸೀಟುಗಳ ಜತೆಗೆ ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆ ಸಿಇಟಿ ಮೂಲಕವೇ ನಡೆಯಲಿದೆ. ಆದರೆ, ಕಾಮೆಡ್‌-ಕೆ ಯುಜಿಇಟಿ ಮೂಲಕ ಹಂಚಿಕೆಯಾಗುತ್ತಿದ್ದ ಮ್ಯಾನೇಜ್‌ಮೆಂಟ್‌ ಕೋಟಾದ ಸೀಟುಗಳು ಮಾತ್ರ ನೀಟ್‌ ಮೂಲಕವೇ ಹಂಚಿಕೆಯಾಗಲಿವೆ.
ಈಗಾಗಲೇ ಮೇ.1 ರಂದು ನಡೆದ ಮೊದಲ ಹಂತದ ನೀಟ್ ಪರೀಕ್ಷೆಯಲ್ಲಿ 6.5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದು, ಎರಡನೇ ಹಂತದ ಪರೀಕ್ಷೆ ಜುಲೈ 24 ರಂದು ನಡೆಯಲಿದೆ. ರಾಜ್ಯಗಳು ಹಾಗೂ ಖಾಸಗಿ ಕಾಲೇಜುಗಳು ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೊಡ್ಡ ಸಂಖ್ಯೆಯಲ್ಲಿ ದೂರು ಬಂದ ಕಾರಣ ಕಳೆದ ತಿಂಗಳು ಸುಪ್ರೀಂ ಕೋರ್ಟ್ ದೇಶಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಬೇಕೆಂದು ಮಹತ್ವರ ಆದೇಶ ಹೊರಡಿಸಿತ್ತು.
ಆದರೆ ಆದೇಶ ಬಂದ ನಂತರ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಒಳಗೊಂಡು ಹಲವು ರಾಜ್ಯಗಳು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಒಂದು ವರ್ಷ ಮುಂದೂಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement