ಮೊಹಮ್ಮದ್ ತಸ್ಲಿಮುದ್ದೀನ್ 
ದೇಶ

ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಆರ್ ಜೆಡಿ ಸಂಸದನಿಗೆ ನೊಟೀಸ್!

ಬಿಹಾರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಆರ್ ಜೆಡಿ ಸಂಸದ ಮೊಹಮ್ಮದ್ ತಸ್ಲಿಮುದ್ದೀನ್ ಗೆ ನೊಟೀಸ್ ಜಾರಿ

ಪಾಟ್ನ: ಬಿಹಾರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಆರ್ ಜೆಡಿ ಸಂಸದ ಮೊಹಮ್ಮದ್ ತಸ್ಲಿಮುದ್ದೀನ್ ಗೆ ಪಕ್ಷ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸುವುದು ಅಲ್ಲದೇ ಸಂಸದ ತಸ್ಲಿಮುದ್ದೀನ್, ಆರ್ ಜೆಡಿ ಪಕ್ಷ ಜೆಡಿಯು ನೇತೃತ್ವದ ಮಹಾ ಮೈತ್ರಿಕೂಟದಿಂದ ಹೊರಬರಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಸ್ಲಿಮುದ್ದೀನ್ ಗೆ ನೋಟಿಸ್ ಜಾರಿ ಮಾಡಿರುವ ಆರ್ ಜೆಡಿ, 10 ದಿನಗಳ ಒಳಗೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು ಇಲ್ಲದೇ ಇದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.   
ತಸ್ಲಿಮುದ್ದೀನ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ತಸ್ಲಿಮುದ್ದೀನ್ ಪಕ್ಷದ ಹಿರಿಯ ನಾಯಕರಾಗಿದ್ದಾರೆ ಹೇಳಿಕೆ ನೀದುವುದಕ್ಕೂ ಮುನ್ನ ಅವರು ಯೋಚನೆ ಮಾಡಬೇಕಿತ್ತು, ಅವರ ವಿರುದ್ಧ ಕ್ರಮ ಕೈಗೊಳ್ಳುವುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!