ನೌಕಾನೆಲೆ (ಸಂಗ್ರಹ ಚಿತ್ರ) 
ದೇಶ

ಕೊಚ್ಚಿ ನೌಕಾನೆಲೆಯಲ್ಲಿ ನಾವಿಕನ ಅನುಮಾನಾಸ್ಪದ ಸಾವು; ತನಿಖೆಗೆ ಆದೇಶ

ಕರ್ತವ್ಯ ನಿರತದಲ್ಲಿದ್ದ ಯೋಧನೊಬ್ಬ ಕೇರಳದ ಕೊಚ್ಚಿ ನೌಕಾನೆಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ...

ಕೊಚ್ಚಿ: ಕರ್ತವ್ಯ ನಿರತದಲ್ಲಿದ್ದ ಯೋಧನೊಬ್ಬ ಕೇರಳದ ಕೊಚ್ಚಿ ನೌಕಾನೆಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ.

ನಾಯಕ್ ಶಿವದಾಸನ್. ಕೆ (53) ಸಾವನ್ನಪ್ಪಿರುವ ಯೋಧ. ಕೊಚ್ಚಿಯ ನೌಕಾನೆಲೆಯಲ್ಲಿ ಕಳೆದ ರಾತ್ರಿ ಕಾರ್ಯನಿರ್ವಹಿಸುತ್ತಿದ್ದ ಶಿವದಾಸನ್ ಅವರು ಇಂದು ಬೆಳಿಗ್ಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಶಿವದಾಸನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು. ಸಾವು ಕುರಿತಂತೆ ಖಚಿತ ಮಾಹಿತಿಗಳು ಲಭ್ಯವಾಗಿಲ್ಲ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನೌಕಾನೆಲೆಯ ಅಧಿಕಾರಿಗಳು ಆಕಸ್ಮಿಕವಾಗಿ ಗುಂಡು ಹಾರಿದೆಯೋ ಅಥವಾ ಉದ್ದೇಶ ಪ್ರೇರಿತವಾಗಿ ಗುಂಡು ಹಾರಿಸಲಾಗಿದೆಯೋ ಎಂಬುದರ ಕುರಿತಂತೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಮೃತ ಯೋಧ ಮೂಲತಃ ಕೇರಳದ ತ್ರಿಸ್ಸೂರು ಜಿಲ್ಲೆಯವರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT