ಮೋದಿ ಮತ್ತು ಅಮಿತಾಬ್ ಬಚ್ಚನ್ 
ದೇಶ

ಎನ್ ಡಿ ಎ ಸರ್ಕಾರದ ಸಾಧನ ಸಮಾರಂಭದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್

ಎನ್​ಡಿಎ ಸರ್ಕಾರದ ದ್ವಿತೀಯ ವಾರ್ಷಿಕ ಸಾಧನಾ ಸಮಾವೇಶ ಸಂಭ್ರಮ ಇಂಡಿಯಾ ಗೇಟ್ ಆವರಣದಲ್ಲಿ ನಡೆಯಲಿದ್ದು, ಖ್ಯಾತ ಬಾಲಿವುಡ್ ನಟ, ಸೂಪರ್ ಸ್ಟಾರ್...

ನವದೆಹಲಿ: ಎನ್​ಡಿಎ ಸರ್ಕಾರದ ದ್ವಿತೀಯ ವಾರ್ಷಿಕ ಸಾಧನಾ ಸಮಾವೇಶ ಸಂಭ್ರಮ ಇಂಡಿಯಾ ಗೇಟ್ ಆವರಣದಲ್ಲಿ ನಡೆಯಲಿದ್ದು,  ಖ್ಯಾತ ಬಾಲಿವುಡ್ ನಟ, ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಮತ್ತು ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಸಚಿವರು ಈ ಸಂದರ್ಭದಲ್ಲಿ ಸರ್ಕಾರದ ಸಾಧನೆ, ನೂತನ ಯೋಜನೆ, ಮುಂದಿನ ಗುರಿ ಇತ್ಯಾದಿ ಬಗ್ಗೆ ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಚ್ಚನ್ ಅವರಿಗೆ ಮೋದಿ ಈಗಾಗಲೇ ಅಧಿಕೃತ ಆಹ್ವಾನ ನೀಡಿದ್ದಾರೆ. ಮೋದಿ ಸಂಪುಟದ ಎಲ್ಲಾ ಸಚಿವರು ಸಮಾರಂಭದಲ್ಲಿ ಹಾಜರಾಗಲಿದ್ದಾರೆ.

ಸಂಜೆ 5 ರಿಂದ ರಾತ್ರಿ 10 ರ ವರೆಗೆ 5 ತಾಸು ನಡೆಯುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ದೂರದರ್ಶನದ ನೇರ ಪ್ರಸಾರ ಮಾಡಲಿದೆ.ದೇಶ್ ಬದಲ್ ರಹಾ ಹೈ ’ ಎಂಬುದು ಇಡೀ ಕಾರ್ಯಕ್ರಮದ ಥೀಮ್ ಸಾಂಗ್ ಆಗಿ ಹೊಮ್ಮಲಿದೆ. ಇದಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಜತೆ ಬಚ್ಚನ್ ಉಪಸ್ಥಿತಿ ವಿಶೇಷ ತಾರಾ ಮೆರುಗು ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!