ಮಗಳು ತಾಯಿಯನ್ನು ಥಳಿಸಿದ ದೃಶ್ಯ(ಫೇಸ್ ಬುಕ್) 
ದೇಶ

85ರ ಹರೆಯದ ತಾಯಿಯನ್ನು ನಿರ್ದಯವಾಗಿ ಥಳಿಸಿದ ಪುತ್ರಿ: ವಿಡಿಯೋ ವೈರಲ್

ಊಟದ ವಿಚಾರವಾಗಿ ತನ್ನ 85ರ ಹರೆಯದ ತಾಯಿಯನ್ನು ಮಗಳು ನಿರ್ದಯವಾಗಿ ಎಳೆದಾಡಿ, ಥಳಿಸಿರುವ ವಿಡಿಯೋ ಇದೀಗ ಸಾಮಾಜಿಕ...

ದೆಹಲಿ: ಊಟದ ವಿಚಾರವಾಗಿ ತನ್ನ 85ರ ಹರೆಯದ ತಾಯಿಯನ್ನು ಮಗಳು ನಿರ್ದಯವಾಗಿ ಎಳೆದಾಡಿ, ಥಳಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೆಹಲಿಯ ಕಾಲ್ಕಜೀ ಪ್ರದೇಶದಲ್ಲಿ ವಾಸವಾಗಿರುವ 60ರ ಹರೆಯದ ಮಗಳು ತನ್ನ ತಾಯಿಗೆ ಥಳಿಸಿದ್ದಾರೆ. ಈ ವೇಳೆ ಎದುರುಗಡೆ ಮನೆಯವರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಕುರಿತಂತೆ ದೃಶ್ಯಾವಳಿಯನ್ನು ಅಪ್ ಲೋಡ್ ಮಾಡಿರುವವರನ್ನು ಸಂಪರ್ಕಿಸಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಿ, ತಾಯಿಯನ್ನು ವಿಚಾರಣೆ ನಡೆಸಿದಾಗ ಆಕೆ ಯಾವುದೇ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.

ಪತಿ ನಿಧನದ ಬಳಿಕ ಸುಮಾರು 10 ವರ್ಷಗಳಿಂದ ಮುದುಕಿ ಮಗಳ ಮನೆಯಲ್ಲೇ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ತಾಯಿ ಯಾವುದೇ ಹೇಳಿಕೆ ನೀಡಿಲ್ಲದ ಕಾರಣ ಪೊಲೀಸರು ಯಾವುದೇ ಕ್ರಮಕೈಗೊಳ್ಳಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!