ನವದೆಹಲಿ: ನೀಟ್ ಅನ್ನು ಒಂದು ವರ್ಷಗಳ ಕಾಲ ಮುಂದೂಡಿ ಹೊರಡಿಸಿರುವ ಸುಗ್ರೀವಾಜ್ಞೆಯಿಂದ ಖಾಸಗಿ ವೈದ್ಯ ಕಾಲೇಜುಗಳ ಅನಾರೋಗ್ಯಕರ ಪ್ರವೃತ್ತಿಗೆ ಅಂತ್ಯ ಬೀಳಲಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್'ಅನ್ನು ಒಂದು ವರ್ಷಗಳ ಕಾಲ ಮುಂದೂಡಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಸಹಿ ಹಾಕಿದ್ದಾರೆ.
ತದ ನಂತರ ಮಾದ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ವೆಂಕಯ್ಯ ನಾಯ್ಡು, ಸಂಸತ್ತಿನಲ್ಲಿ ನೀಟ್ ವಿಷಯವನ್ನು ಪ್ರಸ್ತಾಪಿಸಲಾಯಿತು. ಈ ವೇಳೆ ಕಡಿಮೆ ಅವಧಿಯಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತದೆ ಎಂದು ಎಲ್ಲಾ ಪಕ್ಷಗಳು ಅಭಿಪ್ರಾಯ ವ್ಯಕ್ತಪಡಿಸಿದ್ದವು. ಈ ಹಿನ್ನಲೆಯಲ್ಲಿ ನೀಟ್ ಮುಂದೂಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಖಾಸಗಿ ಕಾಲೇಜುಗಳ ಅನಾರೋಗ್ಯಕರ ಪ್ರವೃತ್ತಿಯಕ್ಕೆ ಅಂತ್ಯವಾಡಬಹುದು. ಅಲ್ಲದೇ, ಸುಗ್ರೀವಾಜ್ಞೆ ಹೊರಡಿಸಿರುವುದರಿಂದ ಪ್ರಸ್ತುತ ಎದುರಾಗಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics