ಸುಪ್ರೀಂ ಕೋರ್ಟ್ 
ದೇಶ

ಮಹಾರಾಷ್ಟ್ರ ಮದ್ಯ ಕೈಗಾರಿಕೆಗಳಿಗೆ ನೀರು ಪೂರೈಕೆ ಕಡಿತಕ್ಕೆ ಸುಪ್ರೀಂ ನಿರಾಕರಣೆ

ಮಹಾರಾಷ್ಟ್ರ ರಾಜ್ಯದಲ್ಲಿನ ಮದ್ಯ ಕೈಗಾರಿಕೆಗಳಿಗೆ ನೀರು ಪೂರೈಕೆ ಸರಬರಾಜನ್ನು ಕಡಿತಗೊಳಿಸಲು ಸುಪ್ರೀಂ ಕೋರ್ಟ್

ನವದೆಹಲಿ: ಮಹಾರಾಷ್ಟ್ರ ರಾಜ್ಯದಲ್ಲಿನ ಮದ್ಯ ಕೈಗಾರಿಕೆಗಳಿಗೆ ನೀರು ಪೂರೈಕೆ ಸರಬರಾಜನ್ನು ಕಡಿತಗೊಳಿಸಲು ಸುಪ್ರೀಂ ಕೋರ್ಟ್ ನೀರಾಕರಿಸಿದೆ. 
ಪ್ರಫುಲ್ಲಾ ಸಿ ಪಾಂಟ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಾಪೀಠ ಮಹಾರಾಷ್ಟ್ರ ಮದ್ಯ ಕೈಗಾರಿಕೆಗಳಿಗೆ ನೀರು ಸರಬರಾಜು ಕಡಿತಕ್ಕೆ ನಿರ್ದೇಶಿಸಲು ನಿರಾಕರಿಸಿದೆ. 
ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ರಾಜ್ಯ ಮತ್ತು ಜಿಲ್ಲಾಡಳಿತ ನೀರು ಕಡಿತಗೊಳಿಸುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. 
ಮೇ 10 ರಿಂದ ಜುಲೈ ಅಂತ್ಯದವರೆಗೆ ಬರಪೀಡಿತ ಮಾರಾಠಾವಾಡಾ ಪ್ರದೇಶದಲ್ಲಿ ಮದ್ಯ ಉದ್ದಿಮೆಗೆ 60% ನೀರು ಕಡಿತಗೊಳಿಸುವಂತೆ ಮತ್ತು ಇತರ ಉದ್ದಿಮೆಗಳಿಗೆ 25% ನೀರು ಕಡಿತಗೊಳಿಸುವಂತೆ ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠ ಆದೇಶ ನೀಡಿತ್ತು ಎನ್ನುವುದನ್ನು ಸುಪ್ರೀಂ ಕೋರ್ಟ್ ಗೆ ಅರ್ಜಿದಾರ ತಿಳಿಸಿದ್ದರು. ಸಾಮಾಜಿಕ ಕಾರ್ಯಕರ್ತರಾಗಿರುವ ಅರ್ಜಿದಾರರು ಈ 40% ನೀರು ಸರಬರಾಜನ್ನು ಕೂಡ ನಿಲ್ಲಿಸುವಂತೆ ಮನವಿ ಮಾಡಿದ್ದರು. 
ಈ ಹಿಂದೆ ನೀರು ಪೋಲಾಗುವುದೆಂದು ಐಪಿಎಲ್ ಪಂದ್ಯಗಳನ್ನು ಮಹಾರಾಷ್ಟ್ರದಿಂದಾಚೆಗೆ ನಿಗದಿಪಡಿಸಲು ನೀಡಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ