ರಾಜದೇವ್ ರಂಜನ್ 
ದೇಶ

ಬಿಹಾರ ಪತ್ರಕರ್ತ ಕೊಲೆ ಪ್ರಕರಣ: 5 ಬಂಧನ

ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣ ಮಹತ್ತರ ಪ್ರಗತಿಯನ್ನು ಪಡೆದುಕೊಂಡಿದ್ದು, ಬಿಹಾರ ಪೊಲೀಸರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿ...

ನವದೆಹಲಿ: ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣ ಮಹತ್ತರ ಪ್ರಗತಿಯನ್ನು ಪಡೆದುಕೊಂಡಿದ್ದು, ಬಿಹಾರ ಪೊಲೀಸರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಬಂಧನಕ್ಕೊಳಗಾಗಿರುವ ಐವರೂ ಆರೋಪಿಗಳು ಶೂಟರ್ ಗಳಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದ ರಾಜದೇವ್ ರಂಜನ್ ಅವರನ್ನು ಮೇ.13ರಂದು ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸಿವಾನ್ ನ ಹತ್ತಿರುವಿರುವ ಹಣ್ಣಿನ ಮಾರುಕಟ್ಟೆ ಬಳಿ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪತ್ರಕರ್ತನ ಕೊಲೆ ಸಾಕಷ್ಟು ನೋವುಂಟು ಮಾಡಿದೆ. ಪ್ರಕರಣ ಕುರಿತು ಆಳವಾದ ತನಿಖೆ ನಡೆಸಿ ಕೊಲೆಗಾರರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಈ ಭರವಸೆ ನೀಡಿದ್ದರು. ಇದರಂತೆ ಇದೀಗ ಬಿಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!