ಚಂದ್ರಬಾಬು ನಾಯ್ಡು 
ದೇಶ

ಪಾಪಿಗಳು ಹೆಚ್ಚುತ್ತಿರುವುದರಿಂದ ದೇವಾಲಯಗಳ ಆದಾಯವೂ ಹೆಚ್ಚುತ್ತಿದೆ: ಚಂದ್ರಬಾಬು ನಾಯ್ಡು

ದೇವಾಲಯಗಳ ಆದಾಯಕ್ಕೂ ಪಾಪಿಗಳಿಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಂಬಂಧ ಕಲ್ಪಿಸಿದ್ದು, ಹೆಚ್ಚು ಪಾಪ ಕೃತ್ಯಗಳನ್ನು ಮಾಡುವವರಿಂದ ದೇವಾಲಯಗಳಿಗೆ ಹೆಚ್ಚು ಆದಾಯ ಬರುತ್ತಿದೆ...

ವಿಜಯವಾಡ: ದೇವಾಲಯಗಳ ಆದಾಯಕ್ಕೂ ಪಾಪಿಗಳಿಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಂಬಂಧ ಕಲ್ಪಿಸಿದ್ದು, ಹೆಚ್ಚು ಪಾಪ ಕೃತ್ಯಗಳನ್ನು ಮಾಡುವವರಿಂದ ದೇವಾಲಯಗಳಿಗೆ ಹೆಚ್ಚು ಆದಾಯ ಬರುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಜಯವಾಡದಲ್ಲಿ ಜಿಲ್ಲಾಧಿಕಾರಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ಜನಗಳು ಹೆಚ್ಚು ಪಾಪ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಪರಿಹಾರ ಕಂಡುಕೊಳ್ಳಲು ದೇವಾಲಯಗಳಿಗೆ ಹೆಚ್ಚು ಹಣವನ್ನು ದೇಣಿಗೆ/ ಕಾಣಿಕೆ ರೂಪದಲ್ಲಿ ನೀಡುತ್ತಾರೆ. ಇದರಿಂದ ದೇವಾಲಯಗಳ ಆದಾಯ ಶೇ.27 ರಷ್ಟು ಹೆಚ್ಚಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮದ್ಯ ಮಾರಾಟ ಗಣನೀಯವಾಗಿ ಕುಸಿತ ಕಾಣುತ್ತಿರುವುದರ ಬಗ್ಗೆ ಮಾತನಾಡಿರುವ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಬರಿ ಮಲೈ ದೇವಾಲಯಕ್ಕೆ ಮಾಲೆ ಹಾಕಿಕೊಂಡು ಹೋಗುತ್ತಿದ್ದಾರೆ. ಮಾಲೆ ಧರಿಸಿದ 40 ದಿನಗಳು ಮದ್ಯ ಸೇವನೆ ಬಿಡಬೇಕಿರುವುದರಿಂದ ಮದ್ಯ ಮಾರಾಟದಲ್ಲಿ ಗಣನೀಯ ಕುಸಿತ ಕಂಡುಬಂದಿದ್ದು ರಾಜ್ಯದ ಆದಾಯಕ್ಕೆ ಹೊಡೆತ ಬೀಳುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಜಿಲ್ಲಾಧಿಕಾರಿಗಳಿಗೆ ಹೆಚ್ಚು ಕಾರ್ಯಕ್ಷಮತೆ ಪ್ರದರ್ಶಿಸಲು ಕರೆ ನೀಡಿರುವ ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶ ಎರಡು ವರ್ಷಗಳ ಕೂಸು. ಅದನ್ನು 2029 ರ ವೇಳೆಗೆ ದೇಶದ ನಂ.1 ರಾಜ್ಯವನ್ನಾಗಿಸಬೇಕು ಎಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಜನರಿಗೆ ಶೇ.80 ರಷ್ಟು ತೃಪ್ತಿ ನೀಡುವಂತಹ ಆಡಳಿತ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT