ಸಾಂದರ್ಭಿಕ ಚಿತ್ರ 
ದೇಶ

ಅಗಸ್ಟಾ ಡೀಲ್ ದಾಖಲೆ ಬಹಿರಂಗಪಡಿಸಲು ರಕ್ಷಣಾ ಸಚಿವಾಲಯಕ್ಕೆ ಸಿಐಸಿ ಸೂಚನೆ

ಅಗಸ್ಟಾ ವೆಸ್ಟ್‌ ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗೊಳಿಸಿ...

ನವದೆಹಲಿ: ಅಗಸ್ಟಾ ವೆಸ್ಟ್‌ ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗೊಳಿಸಿ ಎಂದು ರಕ್ಷಣಾ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ(ಸಿಐಸಿ) ನಿರ್ದೇಶಿಸಿದೆ. 
ಅಟಾರ್ನಿ ಜನರಲ್ ಅವರ ಅಭಿಪ್ರಾಯ ಹಾಗೂ ಇಟಲಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ದಾಖಲೆಗಳನ್ನು ಬಹಿರಂಗಗೊಳಿಸಿ ಎಂದು ಸಿಐಸಿ ರಕ್ಷಣಾ ಸಚಿವಾಲಯಕ್ಕೆ ಸೂಚಿಸಿದೆ. 
ಸುಭಾಶ್ ಅಗರ್ವಾಲ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಐಸಿ ಮಾಹಿತಿ ಆಯುಕ್ತ ದಿವ್ಯಾ ಪ್ರಕಾಶ್ ಸಿನ್ಹಾ ಅವರು, ಭಾರತ ಮತ್ತೆ ಪಡೆದ ಬ್ಯಾಂಕ್ ಪ್ರಮಾಣದ ಬಗ್ಗೆ ಮಾಹಿತಿ ನೀಡಿ. ಅಲ್ಲದೇ ಅಟಾರ್ನಿ ಜನರಲ್ ನೀಡಿದ ಹೇಳಿಕೆಯ ಪ್ರತಿಯನ್ನು ಹಾಗೂ ಇಟಲಿ ಕೋರ್ಟ್ ನಲ್ಲಿ ನಡೆದ ಪ್ರಕರಣ ಸಂಬಂಧದ ದಾಖಲೆಗಳನ್ನು ಒದಗಿಸಿ ಎಂದು ತಿಳಿಸಿದ್ದಾರೆ.
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ ಸಂಬಂಧ ಇಟಲಿ ನ್ಯಾಯಾಲಯದಲ್ಲಿ ಹಾಗೂ ಭಾರತದ ನ್ಯಾಯಾಲಯದಲ್ಲಿ ಪಾಲ್ಗೊಂಡಿದ್ದ ವಕೀಲರ ಬಗ್ಗೆ ಮಾಹಿತಿ ಹಾಗೂ ಅಲ್ಲಿನ ಕಾನೂನಿನ ಬಗ್ಗೆ ಆಯೋಗ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ. 
ಆರ್ ಟಿಐ ಕಾರ್ಯಕರ್ತ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಹಲವಾರು ಗೊಂದಲುಗಳು ಉಲ್ಬಣಿಸಿದ್ದು, ಸಂಬಂಧ ಪಟ್ಟ ದಾಖಲೆಗಳನ್ನು ಮಾಹಿತಿ ಹಕ್ಕು ಅಡಿ ನೀಡಬೇಕು ಎಂದು ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT