ವಿಮಾನಯಾನ ದರ ಏರಿಕೆ ಕಡಿವಾಣಕ್ಕೆ ಶೀಘ್ರವೇ ಕ್ರಮ, ಹೊಸ ನೀತಿ ಘೋಷಣೆ: ಸಚಿವ ಮಹೇಶ್ ಶರ್ಮಾ 
ದೇಶ

ದುಬಾರಿ ವಿಮಾನಯಾನ ದರ ಕಡಿವಾಣಕ್ಕೆ ಶೀಘ್ರವೇ ಹೊಸ ನೀತಿ: ಸಚಿವ ಮಹೇಶ್ ಶರ್ಮಾ

ಹಲವು ತಿಂಗಳ ಚರ್ಚೆಯ ನಂತರ ಕೊನೆಗೂ ಕೇಂದ್ರ ಸರ್ಕಾರ ವಿಮಾನಯಾನ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು ಇದಕ್ಕಾಗಿಯೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

ನವದೆಹಲಿ: ಹಲವು ತಿಂಗಳ ಚರ್ಚೆಯ ನಂತರ ಕೊನೆಗೂ ಕೇಂದ್ರ ಸರ್ಕಾರ ವಿಮಾನಯಾನ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು ಇದಕ್ಕಾಗಿಯೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ.
ಶೀಘ್ರವೇ ಹೊಸ ನಾಗರಿಕ ವಿಮಾನಯಾನ ನೀತಿಗಳನ್ನು ಪ್ರಕಟಿಸಲಿರುವ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ಕ್ರಮ ಕೈಗೊಳ್ಳಲಿದೆ ಎಂದು ಇಲಾಖೆಯ ರಾಜ್ಯ ಸಚಿವ ಮಹೇಶ್ ಶರ್ಮಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.  
ನಾಗರಿಕ ವಿಮಾನಯಾನ ಸಚಿವಾಲಯದ ಬೆಳವಣಿಗೆ ಪ್ರಸ್ತುತ ಶೇ.20 ರಷ್ಟಿದ್ದು ಬೆಳವಣಿಗೆ ದರವನ್ನು ಹೆಚ್ಚಿಸಲು ಹೊಸ ನೀತಿಗಳು ಸಹಕಾರಿಯಾಗಲಿವೆ, ಇನ್ನು ಎರಡು ವಾರಗಳಲ್ಲಿ ಹೊಸ ನೀತಿಯನ್ನು ಸಚಿವ ಸಂಪುಟದ ಮುಂದಿಡಲಾಗುವುದು ಎಂದು ಮಹೇಶ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು 2016 -17 ನೇ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಹೊಸ ವಿಮಾನ ನಿಲ್ದಾಣಗಳಿಗಾಗಿ ಸುಮಾರು 15,000 ಕೋಟಿ ಬಂಡವಾಳ ಹೂಡಲು ನಿರ್ಧರಿಸಿದೆ. ಇನ್ನು ರಜೆ ಹಾಗೂ ವಿಶೇಷ ದಿನಗಳಲ್ಲಿ ವಿಮಾನದರಗಳು ಅತಿಯಾಗಿ ಹೆಚ್ಚಳವಾಗುತ್ತಿದ್ದು ದರ ಏರಿಕೆಗೆ ಕಡಿವಾಣ ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರೂ ಸೂಚಿಸಿದ್ದಾರೆ, ದರ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಮಹೇಶ್ ಶರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT