ಜಾಟ್ ಮತ್ತು ಇತರ ಸಮುದಾಯಗಳ ಮೀಸಲಾತಿಗೆ ಹರ್ಯಾಣ ಹೈಕೋರ್ಟ್ ತಡೆ
ಜಾಟ್ ಮತ್ತು ಇತರ ಐದು ಸಮುದಾಯಗಳಿಗೆ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಮೀಸಲಾತಿ ...
ಚಂಡೀಗಢ: ಜಾಟ್ ಮತ್ತು ಇತರ ಐದು ಸಮುದಾಯಗಳಿಗೆ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಮೀಸಲಾತಿ ವ್ಯವಸ್ಥೆ ಕಲ್ಪಿಸಿರುವ ಹರ್ಯಾಣ ಸರ್ಕಾರದ ನಿರ್ಧಾರಕ್ಕೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಗಳು ತಡೆಯಾಜೆ ತಂದಿವೆ.
ಕಳೆದ ಮಾರ್ಚ್ 29ರಂದು ಹರ್ಯಾಣ ವಿಧಾನಸಭೆ ಅವಿರೋಧವಾಗಿ ಅನುಮೋದನೆ ಮಾಡಿದ ಹರ್ಯಾಣ ಹಿಂದುಳಿದ ವರ್ಗಗಳ ಕಾಯ್ದೆ-2016ರ ಸಾಂವಿಧಾನಿಕ ಮೌಲ್ಯವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ಈ ಆದೇಶ ನೀಡಿದೆ. ನ್ಯಾಯಮೂರ್ತಿ ಎಸ್.ಎಸ್.ಸರೋನ್ ಅವರ ನೇತೃತ್ವದ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.