ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಗುರುವಾರ 2 ವರ್ಷ ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ದೇಶದ ಆಡಳಿತ ಬದಲಾವಣೆ ಕುರಿತು ನರೇಂದ್ರ ಮೋದಿ ವಿಡಿಯೋ ಟ್ವೀಟ್ ಮಾಡಿದ್ದಾರೆ.
ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ‘ಟ್ರ್ಯಾನ್ಸ್ಫಾರ್ವಿುಂಗ್ ಇಂಡಿಯಾ’ ರಾಷ್ಟ್ರಗೀತೆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಆಡಳಿತ ಕುರಿತ ವಿಡಿಯೋ ಬಿಡುಗಡೆ ಮಾಡಿದ್ದಾರೆ.