ದೆಹಲಿಯಲ್ಲಿ ಬಾಲಕನ ವಿವಸ್ತ್ರಗೊಳಿಸಿ ಥಳಿತ (ಎಎನ್ಐ ಚಿತ್ರ) 
ದೇಶ

16 ವರ್ಷದ ಬಾಲಕನನ್ನು ನಗ್ನಗೊಳಿಸಿ, ಮನಸೋ ಇಚ್ಛೆ ಥಳಿತ: ನಾಲ್ವರ ಬಂಧನ

ರಾಷ್ಚ್ರ ರಾಜಧಾನಿ ದೆಹಲಿ ಮತ್ತೊಂದು ಹೀನ ಕೃತ್ಯಕ್ಕೆ ಸಾಕ್ಷಿಯಾಗಿದ್ದು, 16 ವರ್ಷದ ಬಾಲಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ನಗ್ನಗೊಳಿಸಿ ಮನಸೋ ಇಚ್ಚೆ ಥಳಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ನವದೆಹಲಿ: ರಾಷ್ಚ್ರ ರಾಜಧಾನಿ ದೆಹಲಿ ಮತ್ತೊಂದು ಹೀನ ಕೃತ್ಯಕ್ಕೆ ಸಾಕ್ಷಿಯಾಗಿದ್ದು, 16 ವರ್ಷದ ಬಾಲಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ನಗ್ನಗೊಳಿಸಿ ಮನಸೋ ಇಚ್ಚೆ ಥಳಿಸಿದ  ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ದೆಹಲಿಯ ಇಂದೇರ್ ಪುರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ದುಷ್ಕರ್ಮಿಗಳು ಬಾಲಕನನ್ನು ಹಿಗ್ಗಾಮುಗ್ಗ ಥಳಿಸಿ ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ವಿಕೃತಿ ನಡೆಸಲು  ಮುಂದಾಗಿದ್ದರು ಎಂದು ತಿಳಿದುಬಂದಿದೆ. ಕಳೆದ ಸೋಮವಾರವೇ ಪ್ರಕರಣ ನಡೆದಿದ್ದು, ಇದೀಗ ತಡವಾಗಿ ಈ ವಿಚಾರ ಮಾಧ್ಯಮಗಳಲ್ಲಿ ಬೆಳಕಿಗೆ ಬಂದಿದೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ ತನಿಖೆಗೊಳಪಡಿಸಿದ್ದಾರೆ. ಪ್ರತ್ಯಕ್ಷ ದರ್ಶಿಗಳು ಹೇಳುವಂತೆ ಬಾಲಕನ್ನು ರಸ್ತೆಯಲ್ಲಿ ಬೆತ್ತಲಾಗಿ  ಎಳೆದಾಡಿ ಆತನ ಗುಪ್ತಾಂಗದ ಮೇಲೆ ಮದ್ಯ ಚೆಲ್ಲಿ ಮೆಣಸಿನ ಪುಡಿ ಹಾಕಲಾಗಿದೆ. ಈ ಬಗ್ಗೆ ಬಾಲಕನ ಪೋಷಕು ಪೊಲೀಸರಲ್ಲಿ ದೂರಿದ್ದಾರೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಇದೀಗ  ಪ್ರಕರಣ ಸಂಬಂಧ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ