ಕೈಲಾಶ್ ಸತ್ಯರ್ಥಿ 
ದೇಶ

30 ದಿನಗಳಲ್ಲಿ ಮಕ್ಕಳ ಕಳ್ಳಸಾಗಣೆ ಕೇಸುಗಳ ವಿಚಾರಣೆ ಮುಗಿಯಬೇಕು: ಕೈಲಾಶ್ ಸತ್ಯರ್ಥಿ

ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತು ಮಕ್ಕಳ ಜೀತ ಪದ್ಧತಿ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ 30 ದಿನಗಳಲ್ಲಿ...

ನವದೆಹಲಿ: ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತು ಮಕ್ಕಳ ಜೀತ ಪದ್ಧತಿ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ 30 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ನೊಬೆಲ್ ಶಾಂತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜೀತ ಕಾರ್ಮಿಕ ಮಕ್ಕಳು ಮತ್ತು ಮಕ್ಕಳ ಕಳ್ಳಸಾಗಣೆ ನಿರ್ಮೂಲನೆಯ ರಾಷ್ಟ್ರೀಯ ಸಮಾಲೋಚನೆಯಲ್ಲಿ ಮಾತನಾಡಿದ ಸತ್ಯರ್ಥಿ, ಮಕ್ಕಳ ಕಳ್ಳಸಾಗಣೆ ವಿರುದ್ಧ ಸರ್ಕಾರ ಯೋಜನಾ ಚೌಕಟ್ಟು ಒದಗಿಸಲು ದಾಪುಗಾಲಿಡುತ್ತಿರುವ ಸಂದರ್ಭದಲ್ಲಿ, ಮಕ್ಕಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಪುನರ್ವಸತಿ ಮಾಡುವಲ್ಲಿ ಭಾರೀ ಅಂತರವಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಪರಾಧಿಗಳಿಗೆ ದೂರು ದಾಖಲಿಸಿ, ವಿಚಾರಣೆ ನಡೆದು 30 ದಿನಗಳೊಳಗೆ ಶಿಕ್ಷೆ ನೀಡಬೇಕು. ಮಕ್ಕಳಿಗೆ ಕೂಡ ಪುನರ್ವಸತಿ ಕಲ್ಪಿಸಿ 30 ದಿನಗಳೊಳಗೆ ಕಡ್ಡಾಯವಾಗಿ ಪರಿಹಾರ ನೀಡಬೇಕು ಎಂದು ಹೇಳಿದರು.

ಜಾರಿ ಹಂತದಲ್ಲಿರುವ ಮಕ್ಕಳ ಕಳ್ಳಸಾಗಣೆಗೆ ಸಂಬಂಧಪಟ್ಟ ಹೊಸ ಕಾನೂನಿನಂತೆ ನಿಯಮಗಳನ್ನು ಕಡ್ಡಾಯವಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿಗೆ ತರಲು ಗಟ್ಟಿಯಾದ, ನಿಖರ ಮತ್ತು ಜವಾಬ್ದಾರಿಯುತ ವಿಧಾನ ಅತ್ಯಗತ್ಯ ಎಂದು ಹೇಳಿದರು.

ಮಕ್ಕಳ ಹಕ್ಕುಗಳಿಗಾಗಿ ಕಳೆದ 30 ವರ್ಷಗಳಿಂದ ಹೋರಾಡುತ್ತಿರುವ ಸತ್ಯರ್ಥಿಯವರು ಬಚ್ಪನ್ ಬಚಾವೋ ಆಂದೋಲನ ಸರ್ಕಾರೇತರ ಸಂಘಟನೆ ಮೂಲಕ ದೇಶಾದ್ಯಂತ ಸುಮಾರು 80 ಸಾವಿರ ಜೀತ ಮಕ್ಕಳನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT