ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಚಿವನಾಗಿ ಹೊಸ ಇನಿಂಗ್ಸ್ ಆರಂಭಿಸಿದ ಮಾಜಿ ಕ್ರಿಕೆಟಿಗ ಶುಕ್ಲಾ

ಇತ್ತೀಚಿಗಷ್ಟೇ 18 ವರ್ಷಗಳ ದೇಶೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದ ಬಂಗಾಳದ ಮಾಜಿ ಕ್ರಿಕೆಟಿಗ ಲಕ್ಷ್ಮೀರತನ್ ಶುಕ್ಲಾ ಅವರು ಶುಕ್ರವಾರ ಪಶ್ಚಿಮ...

ಲಕ್ಷ್ಮೀರತನ್ ಶುಕ್ಲಾ
Lingaraj Badiger
Updated On : 27 May 2016, 8:46 am
ನವದೆಹಲಿ: ಇತ್ತೀಚಿಗಷ್ಟೇ 18 ವರ್ಷಗಳ ದೇಶೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದ ಬಂಗಾಳದ ಮಾಜಿ ಕ್ರಿಕೆಟಿಗ ಲಕ್ಷ್ಮೀರತನ್ ಶುಕ್ಲಾ ಅವರು ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪುಟದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜಕೀಯದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿ, ಮೊದಲ ಬಾರಿ ಪಶ್ಚಿಮ ಬಂಗಾಳ ವಿಧಾನಸಭೆ ಪ್ರವೇಶಿಸಿದ್ದ ಶುಕ್ಲಾ, ಇಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಚಿವರಾಗಿ ಮಮತಾ ಸಂಪುಟಕ್ಕೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದರು.
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ದೊಡ್ಡ ಹೆಸರು ಮಾಡಲು ವಿಫಲವಾಗಿದ್ದ 35 ವರ್ಷದ ಶುಕ್ಲಾ ಅವರು ಈಗ ರಾಜಕೀಯದಲ್ಲಿ ಮೊದಲ ಯತ್ನದಲ್ಲೇ ಸಚಿವರಾಗುವ ಮೂಲಕ ಹೊಸ ಅಲೆ ಸೃಷ್ಟಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments