ಮನೋಹರ್ ಪರಿಕ್ಕರ್ 
ದೇಶ

ಭಾರತೀಯ ಸೇನೆಯ ಮೂರು ದಳಕ್ಕೂ ಶೀಘ್ರದಲ್ಲೆ ಒಬ್ಬನೇ ದಂಡನಾಯಕ!

ಭೂಸೇನೆ, ವಾಯುಸೇನೆ ಹಾಗೂ ನೌಕಾಸೇನೆಗಳಿಗೆ ಒಬ್ಬರೇ ಜನರಲ್ ನೇಮಕಕ್ಕೆ ಕೇಂದ್ರ ಸರ್ಕಾರ ಕಾರ್ಯಪೌರುತ್ತವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ನವದೆಹಲಿ: ಭೂ, ವಾಯು ಹಾಗೂ ನೌಕಾದಳಗಳಿಗೆ ಒಬ್ಬರೇ ಜನರಲ್ ನೇಮಕಕ್ಕೆ ಕೇಂದ್ರ ಸರ್ಕಾರ ಕಾರ್ಯಪೌರುತ್ತವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ರಕ್ಷಣಾ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಮುಂದಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಬಿಜೆಪಿ 2014ರಲ್ಲಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳ ಪೈಕಿ ಒಂದಾಗಿದ್ದ ಭಾರತೀಯ ಸೇನೆಗಳಿಗೆ ಒಬ್ಬರೇ ಜನರಲ್ ಮಾಡುವ ಕುರಿತು ಕ್ರಮಕೈಗೊಂಡಿದೆ.

ನಿವೃತ್ತ ಜನರಲ್ ಶೇಖ್ ಅಥ್ಕರ್ ನೇತೃತ್ವದಲ್ಲಿ 11 ಸದಸ್ಯರುಲ್ಲಾ ಸಮಿತಿಯೊಂದನ್ನು ರಚಿಸಿ ಸಾಧಕ ಬಾಧಕಗಳ ಕುರಿತಂತೆ 90 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗುವುದು. ಆ ವರದಿ ಅನ್ವಯ ಇದೇ ವರ್ಷದಲ್ಲಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಲಿದೆ ಎಂದು ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.

ಕಾರ್ಗಿಲ್ ಯುದ್ಧದ ಬಳಿಕ ಪ್ರಮುಖ ನಿರ್ಧಾರಗಳನ್ನು ತಕ್ಷಣ ತೆಗೆದುಕೊಳ್ಳುವ ಸಲುವಾಗಿ ಭಾರತೀಯ ಮೂರು ಸೇನೆಗಳಿಗೆ ಒಬ್ಬರೇ ಜನರಲ್ ಮಾಡುವ ಕುರಿತಂತೆ ಉನ್ನತ ಸೇನಾಧಿಕಾರಿಯೊಬ್ಬರು ಶಿಫಾರಸ್ಸು ಮಾಡಿದ್ದರು. ಅದರಂತೆ ಬಿಜೆಪಿ ಲೋಕಸಭೆ ಚುನಾವಣೆಗೂ ಮುನ್ನ ತಾನು ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲೂ ಈ ಕುರಿತು ಆಶ್ವಾಸನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್