ಶ್ರೀನಗರ: ಇಂದು ಬೆಳ್ಳಗ್ಗಿನಿಂದಲೇ ಕಾಶ್ಮೀರದಲ್ಲಿ ಉಗ್ರರು ಮತ್ತು ಭಾರತೀಯ ಭದ್ರತಾ ಸಿಬ್ಬಂದಿ ನಡುವೆ ಭಾರಿ ಗುಂಡಿನ ಕಾಳಗ ನಡೆದಿದೆ.
ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿರುವ ಕಂಚಿಪೋರ ಹಳ್ಳಿಯಲ್ಲಿ ಗುಂಡಿನ ಕಾಳಗ ನಡೆದಿದೆ.
ಈ ಪ್ರದೇಶದಲ್ಲಿ ಇಬ್ಬರು ಉಗ್ರರು ನುಸುಳಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ಪತ್ತೆಗಾಗಿ ತಂಗಮಾರ್ಗದಲ್ಲಿರುವ ಕಂಚಿಪೋರ ಹಳ್ಳಿಯಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು.
ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಉಗ್ರರ ದಾಳಿಗೆ ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ 6.30ರಿಂದ ಗುಂಡಿನ ಚಕಮಕಿ ಆರಂಭವಾಗಿದ್ದು, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.