ದೇಶ

ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಏರಿಸಲು ಕೇಂದ್ರ ತೀರ್ಮಾನ

Shilpa D

ಸಹರಾನ್‌ಪುರ(ಲಕ್ನೋ): ಎಲ್ಲಾ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ವೈದ್ಯರ ಕೊರತೆ ಇರುವುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ವಾರದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು. ಈ ಬದಲಾವಣೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಎಲ್ಲ ವೈದ್ಯರಿಗೆ ಅನ್ವಯವಾಗಲಿದೆ’ ಎಂದಿದ್ದಾರೆ.

ಗರ್ಭಿಣಿಯರಿಗೆ ತಿಂಗಳಿಗೆ ಒಂದು ಬಾರಿ ಉಚಿತ ಚಿಕಿತ್ಸೆ ನೀಡಬೇಕು ಎಂದು ವೈದ್ಯರಲ್ಲಿ ಮನವಿ ಮಾಡಿದ ಮೋದಿ, ಪ್ರತಿ ತಿಂಗಳ 9ನೇ ತಾರೀಕಿನಂದು ವೈದ್ಯರು ಗರ್ಭಿಣಿಯರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದಿದ್ದಾರೆ.

SCROLL FOR NEXT