ನೀಟ್ ಸುಗ್ರೀವಾಜ್ಞೆ ತಡೆಗೆ ಸುಪ್ರೀಂ ಕೋರ್ಟ್ ನಕಾರ
ಕೇಂದ್ರ ಸರ್ಕಾರ ಹೊರಡಿಸಿರುವ ನೀಟ್ ಸುಗ್ರೀವಾಜ್ಞೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ...
ನವದೆಹಲಿ: ಕೇಂದ್ರ ಸರ್ಕಾರ ಹೊರಡಿಸಿರುವ ನೀಟ್ ಸುಗ್ರೀವಾಜ್ಞೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ವೈದ್ಯಕೀಯ ಕೋರ್ಸ್ ಗಳಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯನ್ನು ಒಂದು ವರ್ಷ ಮುಂದೂಡಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರೀವಾಜ್ಞೆಗೆ ತಡೆ ನೀಡುವಂತೆ ಕೋರಿ ಆನಂದ್ ರೈ ಮತ್ತು ವೈದ್ಯಕೀಯ ವಿದ್ಯಾರ್ಥಿ ಸಂಜೀವ್ ಸಕ್ಸೆನಾ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನೀಟ್ ಸುಗ್ರೀವಾಜ್ಞೆಗೆ ತಡೆ ನೀಡಲು ನಿರಾಕರಿಸಿದ್ದು, ಮೆಡಿಕಲ್ ಕಾಲೇಜುಗಳ ಸೇರ್ಪಡೆಗಾಗಿ ಈ ವರ್ಷ ನೀಟ್ ವ್ಯಾಪ್ತಿಗೆ ಒಳಪಡುವುದಕ್ಕೆ ಕೆಲವು ರಾಜ್ಯಗಳಿಗೆ ವಿನಾಯಿತಿ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಸುಗ್ರೀವಾತ್ರೆ ಹೊರಡಿಸಿದೆ. ಈ ಹಂತದಲ್ಲಿ ಯಾವುದೇ ಮಧ್ಯಾವಧಿ ಆದೇಶ ಹೊರಡಿಸಿದಲ್ಲಿ ಅದರಿಂದ ಇನ್ನಷ್ಟು ಗೊಂದಲ ಸೃಷ್ಟಿಯಾಗುತ್ತದೆ ಎಂದು ನ್ಯಾಯಾಪೀಠ ಹೇಳಿದೆ.
ದೇಶಾದ್ಯಂತ ವೈದ್ಯಕೀಯ ಪದವಿ ಕೋರ್ಸುಗಳಿಗೆ ಏಕಪರೀಕ್ಷೆಯನ್ನು ನಡೆಸಬೇಕೆಂಬ ಸುಪ್ರೀಂ ಕೋರ್ಟಿನ ತೀರ್ಪನ್ನು ವಿಫಲಗೊಳಿಸುವುದು ಕೇಂದ್ರದ ನೀಟ್ ಸುಗ್ರೀವಾಜ್ಞೆಯ ಅಂತರ್ಗತ ಉದ್ದೇಶವಾಗಿದೆ ಎಂದು ಆನಂದ್ ರಾಯ್ ಮತ್ತು ಸಂಜೀವ್ ತಮ್ಮ ಅರ್ಜಿಯಲ್ಲಿ ವಾದಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.