ಸಾಂದರ್ಭಿಕ ಚಿತ್ರ 
ದೇಶ

ಐಪಿಎಲ್ ಬೆಟ್ಟಿಂಗ್: ಪತ್ನಿಯನ್ನೇ ಪಣಕ್ಕಿಟ್ಟು ಸೋತ ಭೂಪ!

ಮಹಾಭಾರತದಲ್ಲಿ ಯುಧಿಷ್ಠಿರ ಪಗಡೆಯಾಟದಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಸೋತಿರುವುದನ್ನು ನಾವೆಲ್ಲಾ ಕೇಳಿದ್ದೇವೆ. ಆದರೆ...

ಕಾನ್ಪುರ: ಮಹಾಭಾರತದಲ್ಲಿ ಯುಧಿಷ್ಠಿರ ಪಗಡೆಯಾಟದಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಸೋತಿರುವುದನ್ನು ನಾವೆಲ್ಲಾ ಕೇಳಿದ್ದೇವೆ. ಆದರೆ ಆಧುನಿಕ ಭಾರತದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬ ಐಪಿಎಲ್ ಬೆಟ್ಟಿಂಗ್​ನಲ್ಲಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟು ಸೋತಿದ್ದಾನೆ.
ಐಪಿಎಲ್ ಬೆಟ್ಟಿಂಗ್​ನಿಂದಾಗಿ ಸಾಕಷ್ಟು ಜನರು ಹಣ, ಒಡವೆ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಆದರೆ ಅದಕ್ಕೂ ಒಂದು ಹೆಜ್ಜೆ ಮುಂದೆ ಹೋದ ಕಾನ್ಪುರದ ಗೋವಿಂದನಗರ ಪ್ರದೇಶದ ವ್ಯಕ್ತಿ ತನ್ನ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿದ್ದಾನೆ. ಆದರೆ ಈತ ಜೂಜಿನಲ್ಲಿ ಸೋಲು ಅನುಭವಿಸಿದ್ದಾನೆ.
ಬೆಟ್ಟಿಂಗ್ ನಲ್ಲಿ ಗೆದ್ದವರು ಈತನ ಮನೆಯ ಸುತ್ತಲೂ ಓಡಾಡಲು ಪ್ರಾರಂಭಿಸಿದ್ದಾರೆ ಮತ್ತು ಫೋನ್​ನಲ್ಲಿ ಅಸಭ್ಯವಾಗಿ ವರ್ತಿಸಿದ್ದು, ಬೆದರಿಕೆ ಸಹ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಮಹಿಳೆ ಸ್ಥಳೀಯ ಎನ್​ಜಿಒವೊಂದರ ಸಹಾಯದಿಂದ ಪೊಲೀಸರ ಮೊರೆ ಹೋಗಿದ್ದು ದೂರು ದಾಖಲಿಸಿದ್ದಾರೆ. ಇಷ್ಟೆಲ್ಲಾ ಘಟನೆ ನಡೆದ ನಂತರ ಹೆಂಡತಿಯನ್ನು ಪಣದಲ್ಲಿ ಸೋತ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ.
ಮದುವೆಯಾದ ದಿನದಿಂದಲೂ ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈತ ಇತ್ತೀಚೆಗೆ 7 ಲಕ್ಷ ರೂ. ತರುವಂತೆ ಒತ್ತಾಯಿಸುತ್ತಿದ್ದ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಿಸಿಕೊಂಡಿದ್ದು, ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT