ಮುಂಬಯಿ: ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರ ಚುಕ್ಕಾಣಿ ಹಿಡಿದರುವ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಶಿವ್ ವಡಾ ಪಾವ್ ಮತ್ತು ನಮೋ ಟೀ ಸ್ಟಾಲ್ ಆರಂಭಿಸಲು ಮುಂದಾಗಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಸಂಕ್ಷಿಪ್ತಗೊಳಿಸಿ ನಮೋ ಟೀಸ್ಟಾಲ್ ಎಂದು, ಶಿವಸೇನೆ ಹೆಸರಿನಲ್ಲಿ ಶಿವ್ ವಡಾಪಾವ್ ಎಂಬ ತಿಂಡಿಯನ್ನು ಮೆನುವಿನಲ್ಲಿ ಸೇರಿಸಲು ನಿರ್ಧರಿಸಲಾಗಿದೆ.
ಮುಂಬಯಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಪ್ರಕಾಶ್ ಗಂಗಾಧರೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಪಕ್ಷದ ಸಭೆಯಲ್ಲಿ ಈ ಬಗ್ಗ ಚರ್ಚಿಸಿ ಒಮ್ಮತಕ್ಕೆ ಬರಲಾಗಿದೆ ಎಂದು ಬಿಜೆಪಿ ಮುಖಂಡ ಮನೋಜ್ ಕೊಟಾಕ್ ತಿಳಿಸಿದ್ದಾರೆ.
ಈ ಪ್ರಸ್ತಾವನೆಯನ್ನು ಗ್ರೇಟರ್ ಮುಂಬಯಿ ಮಹಾನಗರ ಪಾಲಿಕೆ ಆಯುಕ್ತರಿಗೆ ರವಾನಿಸಲಾಗಿದ್ದು ಅವರ ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನೂ ಬಿಜೆಪಿ ಪ್ರಸ್ತಾವನೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.