ಶಿಲ್ಲಾಂಗ್: ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇಘಾಲಯದ ಪಾರಂಪರಿಕ ಬುಡುಕಟ್ಟು ಜನಾಂಗವಿರುವ ಮಫ್ಲಾಂಗ್ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಸ್ಥಳೀಯ ಜನರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ಡೋಲು, ನಗಾರಿ ಬಾರಿಸಿ ಸಂಭ್ರಮಿಸಿದರು.
ನಂತರ ಕಾಸಿ ಬುಡಕಟ್ಟು ಜನಾಂಗದವರೊಂದಿಗೆ ಕೆಲ ಹೊತ್ತು ಮಾತನಾಡಿದ ಪ್ರಧಾನಿ, ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಮೇಘಾಲಯದ ರಾಜ್ಯಪಾಲ ವಿ ಶಣ್ಮುಗನಾಥನ್, ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಹಾಜರಿದ್ದರು.