ನವದೆಹಲಿ: ಆಫ್ರಿಕಾ ಪ್ರಜೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರಗತಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಆಫ್ರಿಕಾ ಪ್ರಜೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತುಕತೆ ನಡೆಸಲಾಗಿದ್ದು, ತಪ್ಪಿತಸ್ಥರನ್ನು ಶೀಘ್ರಗತಿಯಲ್ಲಿ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆಂದು ಹೇಳಿದ್ದಾರೆ.
ಅಲ್ಲದೆ, ಆಫ್ರಿಕಾ ಪ್ರಜೆ ಸುರಕ್ಷತೆಗೆ ಭರವಸೆ ನೀಡಿರುವ ಅವರು, ಆಫ್ರಿಕಾ ಪ್ರಜೆಗಳಿರುವ ಕಡೆ ಸಂವೇದನಾಶೀಲತಾ ಪ್ರಚಾರವನ್ನು ಅಭಿಯಾನವನ್ನು ಶೀಘ್ರದಲ್ಲಿ ಆಯೋಜನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಆಫ್ರಿಕಾ ದೇಶದ ಪ್ರಜೆಯಾಗಿದ್ದ ಮಸೊಂದಾ ಕೆಟಾಡ ಅಲಿವರ್ ಎಂಬ ಯುವಕನನ್ನು ಮೇ 20ರಂದು ನವದೆಹಲಿಯ ವಸಂತ್ ಕುಂಜ್ ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.