ಸೇನಾ ಕ್ಯಾಂಪ್'ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯೋಧ
ಪಂಜಾಬ್ ನ ಪಠಾಣ್ ಕೋಟ್ ನಲ್ಲಿನ ಸೇನಾ ಕ್ಯಾಂಪ್ ವೊಂದರಲ್ಲಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ...
ಪಠಾಣ್ ಕೋಟ್: ಪಂಜಾಬ್ ನ ಪಠಾಣ್ ಕೋಟ್ ನಲ್ಲಿನ ಸೇನಾ ಕ್ಯಾಂಪ್ ವೊಂದರಲ್ಲಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯೋಧನಿಗೆ 2 ಮಗ ಹಾಗೂ ಓರ್ವ ಮಗಳಿದ್ದು, ಇವರು ಬಿಹಾರ ಮೂಲದವರಾಗಿದ್ದಾರೆಂದು ತಿಳಿದುಬಂದಿದೆ. ಭಾರತೀಯ ಸೇನೆಯಲ್ಲಿ ಕಳೆದ 14 ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದ ಈ ಯೋಧ ಆದಾವ ಕಾರಣಕ್ಕೋ ಏನೋ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಇನ್ನು ಯೋಧನ ಆತ್ಮಹತ್ಯೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಸ್ಥಳೀಯ ನ್ಯಾಯಾಲಯ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.