ಕಿರಣ್ ಬೇಡಿ 
ದೇಶ

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿ ಕಿರಣ್ ಬೇಡಿ ಪ್ರಮಾಣ

ದೇಶದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ನಾಯಕಿ ಕಿರಣ್‌ ಬೇಡಿ ಅವರು ಭಾನುವಾರ ಪುದುಚೇರಿ ನೂತನ ಲೆಫ್ಟಿನೆಂಟ್ ...

ಪುದುಚೇರಿ: ದೇಶದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ನಾಯಕಿ ಕಿರಣ್‌ ಬೇಡಿ ಅವರು ಭಾನುವಾರ ಪುದುಚೇರಿ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಜುಲೈ 2014ರಲ್ಲಿ ವಿರೇಂದ್ರ ಕಠಾರಿಯಾ ಅವರ ನಿವೃತ್ತಿಯ ನಂತರ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆ ಇದುವರೆಗೂ ಖಾಲಿ ಇತ್ತು. ಅಂಡಮಾನ್ ನಿಕೋಬಾರ್ ಲೆಫ್ಟಿನೆಂಟ್ ಗವರ್ನರ್ ಅಜಯ್ ಕುಮಾರ್ ಸಿಂಗ್ ಅವರಿಗೆ ಪುದುಚೇರಿ ಉಸ್ತುವಾರಿ ನೀಡಲಾಗಿದೆ. ಇದೀಗ ಆ ಸ್ಥಾನಕ್ಕೆ ಕೇಂದ್ರ ಸರ್ಕಾರ ಕಿರಣ್ ಬೇಡಿ ಅವರನ್ನು ನೇಮಕ ಮಾಡಿದೆ.
ಬೇಡಿ ಅವರು 30 ವರ್ಷಗಳ ಕಾಲ ಖಡಕ್‌ ಪೊಲೀಸ್‌ ಅಧಿಕಾರಿಯಾಗಿ ಖ್ಯಾತಿಗಳಿಸಿದ್ದರು. ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು. 2015 ರಲ್ಲಿ ದೆಹಲಿ ವಿಧಾನಸಭೆಗೆ ಬಿಜೆಪಿ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕೃಷಿ, ಶಿಕ್ಷಣ, ಪ್ರವಾಸೋದ್ಯಮ, ಹೆಲ್ತ್ ಕೇರ್, ಕೈಗಾರಿಕೆ, ಮಹಿಳಾ ಯೋಗಕ್ಷೇಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲಿ ಎನ್ನುವುದೇ ನನ್ನ ಬಯಕೆ ಎಂದು ಕಿರಣ್ ಬೇಡಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"