ಸಾಂದರ್ಭಿಕ ಚಿತ್ರ 
ದೇಶ

ಕ್ರಿಕೆಟ್ ಆಡಿದ್ದಕ್ಕೆ ಮಕ್ಕಳನ್ನು ಬಂಧಿಸಿದ ಐಜಿ

ಪೊಲೀಸ್ ತರಬೇತಿ ಶಾಲೆಯಲ್ಲಿ ಕ್ರಿಕೆಟ್ ಆಡಿದ ಕಾರಣಕ್ಕೆ ಅಪ್ರಾಪ್ತ ಬಾಲಕರನ್ನು ಬಂಧನಕ್ಕೊಳಪಡಿಸಿರುವ ಘಟನೆಯೊಂದು ಮೊರದಾಬಾದ್ ನಲ್ಲಿ...

ಮೊರದಾಬಾದ್: ಪೊಲೀಸ್ ತರಬೇತಿ ಶಾಲೆಯಲ್ಲಿ ಕ್ರಿಕೆಟ್ ಆಡಿದ ಕಾರಣಕ್ಕೆ ಅಪ್ರಾಪ್ತ ಬಾಲಕರನ್ನು ಬಂಧನಕ್ಕೊಳಪಡಿಸಿರುವ ಘಟನೆಯೊಂದು ಮೊರದಾಬಾದ್ ನಲ್ಲಿ ಶುಕ್ರವಾರ ನಡೆದಿದೆ.

ಬಿ.ಆರ್ ಮೀನಾ ಮಕ್ಕಳನ್ನು ಬಂಧನ್ನು ಬಂಧಿಸಿದ ಮೊರದಾಬಾದ್ ನ ಇನ್ಸ್ಪೆಕ್ಟರ್ ಜನರಲ್ ಆಗಿದ್ದಾರೆ. ಬಾಲಕರು ಪೊಲೀಸ್ ತರಬೇತಿ ಶಾಲೆಯಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಬಾಲು ಮೀನಾ ಅವರಿಗೆ ತಗುಲಿದೆ. ಇದರಿಂದ ತೀವ್ರವಾಗಿ ಕೋಪಗೊಂಡಿರುವ ಅವರು ಸ್ಥಳೀಯ ನಾಗರೀಕ ಪೊಲೀಸರಿಗೆ ಮಾಹಿತಿ ನೀಡಿ ಮಕ್ಕಳನ್ನು ಬಂಧಿಸಿ, ಶಿಕ್ಷೆ ನೀಡುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಐಜಿ ಮೀನಾ ಅವರ ಆದೇಶದಂತೆ ಮಕ್ಕಳನ್ನು ನಾಗರೀಕ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆದರೆ, ಬಾಲಕರು ಆಪ್ರಾಪ್ತರಾಗಿದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಲ್ಲ ಎಂದು ಎಸ್ ಪಿ ರೂರಲ್ ಸುಜಾತಾ ಸಿಂಗ್ ಅವರು ಹೇಳಿದ್ದಾರೆ.

ಇನ್ನು ಮಕ್ಕಳ ಬಂಧನದಿಂದಾಗಿ ಗಾಬರಿಗೊಂಡಿರುವ ಬಂಧನಕ್ಕೊಳಗಾದ ಬಾಲಕರ ಪೋಷಕರು ಠಾಣೆ ಬಳಿ ಬಂದು ಸಾಕಷ್ಟು ಗದ್ದಲವನ್ನುಂಟು ಮಾಡಿದ್ದರು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ