ಲಖನೌ: ಬಿರುಗಾಳಿ ಸಹಿತ ರಭಸದ ಮಳೆಗೆ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾನ್ ಪುರದ ಬಿಹ್ಲಾವುರ್ ಪ್ರದೇಶದಲ್ಲಿ ಇಬ್ಬರು ಮೃತಪಟ್ಟಿದ್ದು, ಮೌ ಜಿಲ್ಲೆಯಲ್ಲಿ ಓರ್ವ ಮೃತಪಟ್ಟಿದ್ದಾನೆ. ವಾರಣಾಸಿ ಶಿವಪುರದಲ್ಲಿ ಓರ್ವ ವ್ಯಕ್ತಿಯ ಮೇಲೆ ಮರ ಬಿದ್ದು ಸಾವನ್ನಪ್ಪಿದ್ದಾನೆ.
ರಾಮಂಗಾನ್ ನಲ್ಲಿ ಮಹಿಳೆಯೊಬ್ಬಳ ಮೇಲೆ ಮಣ್ಣು ಕುಸಿದು ಮೃತಪಟ್ಟಿದ್ದು, ಹಸನ್ ದೀ ಹಳ್ಳಿಯಲ್ಲಿ ಶಾಲೆಯ ಗೇಟ್ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಫರುಕ್ಕಾಬಾದ್ ನಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅನೇಕ ಮರಗಳು ಉರುಳಿ ಬಿದ್ದಿರುವುದರಿಂದ ಬಹುತೇಕ ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಇನ್ನು 48 ಗಂಟೆಗಳ ಕಾಲ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.