ಇಂಧೋರ್ ನ ಮಹಾರಾಜ ಯಶವಂತ್ ರಾವ್ ಆಸ್ಪತ್ರೆ 
ದೇಶ

ಸರ್ಕಾರಿ ಆಸ್ಪತ್ರೆ ಯಡವಟ್ಟು: ಆಕ್ಸಿಜನ್ ಬದಲು ನೈಟ್ರಸ್ ಆಕ್ಸೈಡ್ ಪೂರೈಕೆ, ಮಗು ಸಾವು

ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಪ್ರತಿದಿನ ರೋಗಿಗಳು ಹಲವು ಸಮಸ್ಯೆಗಳನ್ನು ಅನುಭವಿಸುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಪುಷ್ಠಿ ನೀಡುವಂತ ...

ಇಂದೋರ್: ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಪ್ರತಿದಿನ ರೋಗಿಗಳು ಹಲವು ಸಮಸ್ಯೆಗಳನ್ನು ಅನುಭವಿಸುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಪುಷ್ಠಿ ನೀಡುವಂತ ಮತ್ತೊಂದು ಅನಾಹುತ  ಮಧ್ಯಪ್ರದೇಶದ ಇಂದೋರ್ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಇಂಧೋರ್ ನ ಮಹಾರಾಜ ಯಶವಂತ್ ರಾವ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಮಗುವಿಗೆ ಆಮ್ಲಜನಕದ ಬದಲು ನೈಟ್ರಸ್ ಆಕ್ಸೈಡ್ ಪೂರೈಕೆಯಾಗಿ ಮಗು ಮೃತಪಟ್ಟಿದೆ. ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಮಗುವಿಗೆ ಆಮ್ಲಜನಕದ ಬದಲು ಅರಿವಳಿಕೆಗೆ ಬಳಕೆಯಾಗುವ ನೈಟ್ರಸ್ ಆಕ್ಸೈಡ್ ನೀಡಿರುವುದು ದುರಂತಕ್ಕೆ ಕಾರಣವಾಗಿದೆ.

ಐದು ವರ್ಷದ ಆಯುಶ್ ಮೃತಪಟ್ಟ ಮಗು. ಇದೇ ಆಸ್ಪತ್ರೆಯಲ್ಲಿ ಬೇರೆ ಯಾವುದೋ ಅನಿಲ ನೀಡಿದ ಕಾರಣ ಅಸ್ವಸ್ಥಗೊಂಡಿರುವ 18 ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಶಸ್ತ್ರ ಚಿಕಿತ್ಸಾ ಕೊಠಡಿಯನ್ನು ಜಪ್ತಿ ಮಾಡಿದ್ದು, ಸಂಬಂಧಿಸಿದವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ಕೊಠಡಿಯಲ್ಲಿ ಎರಡು ಪ್ರತ್ಯೇಕ ಬಣ್ಣಗಳ ಪೈಪ್‌ಗಳಿದ್ದು, ಅವುಗಳಲ್ಲಿ ಹರಿಯುವ ಅನಿಲ ಕಲಬೆರಕೆಗೊಂಡಿವೆ ಎಂದು ಶಸ್ತ್ರ ಚಿಕಿತ್ಸಕ ಉಮಿತ್ ಶುಕ್ಲಾ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video