ಜೆಎನ್ ಯು 
ದೇಶ

ಸಂಸ್ಕೃತಿ, ಯೋಗ ಕೋರ್ಸ್; ಹಿಂದಿನ ನಿರ್ಧಾರದ ಮರುಪರಿಶೀಲನೆ- ಜೆಎನ್ ಯು

ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ಸಂಬಂಧಿಸಿದ ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯ ಬಗ್ಗೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ತನ್ನ ನಿರ್ಧಾರವನ್ನು ಮರುಪರಿಶೀಲನೆ

ನವದೆಹಲಿ: ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ಸಂಬಂಧಿಸಿದ ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯ ಬಗ್ಗೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ತನ್ನ ನಿರ್ಧಾರವನ್ನು ಮರುಪರಿಶೀಲಿಸಲುಮುಂದಾಗಿದೆ.

ಸಂಸ್ಕೃತಿ ಹಾಗೂ ಯೋಗದ ಬಗ್ಗೆ ಕೋರ್ಸ್ ಗಳನ್ನು ಪ್ರಾರಂಭಿಸುವುದರ ಬಗ್ಗೆ ಈ ಹಿಂದೆ ಜೆಎನ್ ಯು ಕೈಗೊಂಡಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡಲು  ಇತ್ತೀಚೆಗಷ್ಟೇ ನಡೆದ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಪರಿಷತ್ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪರಿಷತ್ ನ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಹಿಂದೆ ನಡೆದಿದ್ದ ಸಭೆಯಲ್ಲಿ( 2015 ರ ನವೆಂಬರ್) ನಲ್ಲಿ ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಕೆಲವು ಪ್ರಾಧ್ಯಾಪಕರಿಂದ ವಿರೋಧ ವ್ಯಕ್ತವಾಗಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿತ್ತು. ಆದರೆ ಯೋಗದ ಕುರಿತು ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭ ಮಾಡುವ ಪ್ರಸ್ತಾವನೆ ಮತ್ತೊಮ್ಮೆ ಚರ್ಚೆಗೆ ಬಂದಿದ್ದು ವಿಶ್ವವಿದ್ಯಾನಿಲಯದ ಉಪಕುಲಪತಿ ಜಗದೀಶ್ ಕುಮಾರ್ ಅಲ್ಪಾವಧಿ ಕೋರ್ಸ್ ಗಳ ಸ್ವರೂಪದ ಬಗ್ಗೆ ಸಲಹೆ-ಸೂಚನೆಗಳನ್ನು ನೀಡುವಂತೆ ಎಲ್ಲಾ ವಿಭಾಗಗಳಿಗೂ ನಿರ್ದೇಶನ ನೀಡಿದ್ದಾರೆ. ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ಸಂಬಂಧಿಸಿದ ಕೋರ್ಸ್ ಗಳ ಈ ಹಿಂದಿನ ಕರಡಿನ ಪ್ರಕಾರ ಕೋರ್ಸ್ ಗಳ ಪಠ್ಯಗಳಲ್ಲಿ ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ವ್ಯವಸ್ಥೆ ಕುರಿತಾದ ಮಾಹಿತಿಯನ್ನು ಅಳವಡಿಸಬೇಕೆಂಬ ಪ್ರಸ್ತಾವನೆ ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!