ಮಹಾರಾಷ್ಟ್ರದ ವಾರ್ದದಲ್ಲಿರುವ ಕೇಂದ್ರ ಮದ್ದುಗುಂಡು ಡಿಪೋದಲ್ಲಿ ಭೀಕರ ಅಗ್ನಿ ಅನಾಹುತ 
ದೇಶ

ಮಹಾರಾಷ್ಟ್ರ: ಕೇಂದ್ರ ಸೇನಾ ಡಿಪೋದಲ್ಲಿ ಭೀಕರ ಸ್ಫೋಟ; 17 ಯೋಧರ ಸಾವು

ಮಹಾರಾಷ್ಟ್ರದಲ್ಲಿರುವ ಕೇಂದ್ರ ಮದ್ದುಗುಂಡು ಡಿಪೋದಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಅಧಿಕಾರಿಗಳು...

ನಾಗಪುರ: ಮಹಾರಾಷ್ಟ್ರದಲ್ಲಿರುವ ಕೇಂದ್ರ ಮದ್ದುಗುಂಡು ಡಿಪೋದಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಅಧಿಕಾರಿಗಳು ಮತ್ತು 15 ಯೋಧರು ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 
ಮಹಾರಾಷ್ಟ್ರದ ವಾರ್ದದಲ್ಲಿರುವ ಕೇಂದ್ರ ಮದ್ದುಗುಂಡು ಡಿಪೋದಲ್ಲಿ ಸ್ಫೋಟ ಸಂಭವಿಸಿ ಭೀಕರ ಅಗ್ನಿ ಅನಾಹುತವಾಗಿದೆ. ಘಟನೆಯಲ್ಲಿ 15 ರಕ್ಷಣಾ ಭದ್ರತಾ ಸಿಬ್ಬಂದಿಗಳು ಹಾಗೂ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ. ಇನ್ನು 17 ಯೋಧರು ಮತ್ತು ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. 25 ಸಿಬ್ಬಂದಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಕಿ ನಂದಿಸುವ ಕಾರ್ಯಚರಣೆ ಕೈಗೊಳ್ಳಲಾಗಿದ್ದು, ಮತ್ತೊಂದು ಸ್ಫೋಟ ಸಂಭವಿಸದ ರೀತಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!