ನದಿ ಜೋಡಣೆ ಅಭಿಯಾನದ ಕಾರ್ಯಕರ್ತರಿಂದ ಸ್ಯಾಂಡ್ ಬಾತ್ (ಎಎನ್ಐಚಿತ್ರ) 
ದೇಶ

ಯಮುನಾ ನದಿಯಲ್ಲಿ ನೀರಿನ ಕೊರತೆ: ಸ್ಯಾಂಡ್ ಬಾತ್ ಮೂಲಕ ವಿನೂತನ ಪ್ರತಿಭಟನೆ

ಯಮುನಾ ನದಿ ಮಲಿನಗೊಂಡು, ನೀರು ಕಡಿಮೆಯಾಗಿರುವುದರಿಂದ ನದಿ ಜೋಡಣೆ ಅಭಿಯಾನದ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಆಗ್ರಾ: ಯಮುನಾ ನದಿ ಮಲಿನಗೊಂಡು, ನೀರು ಕಡಿಮೆಯಾಗಿರುವುದರಿಂದ ನದಿ ಜೋಡಣೆ ಅಭಿಯಾನದ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನೀರಿನ ಬದಲು ಮರಳಲ್ಲಿ ಸ್ನಾನ( ಸ್ಯಾಂಡ್ ಬಾತ್) ಮಾಡುವ ಮೂಲಕ ನದಿಯಲ್ಲಿ ನೀರಿನ ಕೊರತೆ ಎದುರಾಗಿರುವುದರ ಕುರಿತು ಅರಿವು ಮೂಡಿಸಲು ಪ್ರತಿಭಟನೆ ನಡೆಸಿದ್ದಾರೆ. ಯಮುನಾ ನದಿಯಲ್ಲಿ ನೀರಿನ ಕೊರತೆ ಉಂಟಾದರೆ ನದಿ ದಡದಲ್ಲಿರುವ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ಅಂದವೂ ಹಾಳಾಗಲಿದೆ ಎಂದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ. 
ಇನ್ನು ಗಂಗಾ ದಸರಾ ನಡೆಯುವ ದಿನಗಳೂ ಹತ್ತಿರವಾಗುತ್ತಿದ್ದು, ಯಮುನಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮರಳಿನಲ್ಲಿ ಸ್ನಾನ ಮಾಡುವ ಮೂಲಕ ಯಮುನಾ ನದಿಯಲ್ಲಿ ನೀರು ಹೆಚ್ಚುವಂತೆ ಮಾಡಲು ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!