ಜಾಟ್ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಜಾಟ್ ಪ್ರತಿಭಟನೆ ಸಂದರ್ಭ ಸಾಮೂಹಿಕ ಅತ್ಯಾಚಾರ ನಡೆದಿದೆ: ಪ್ರಕಾಶ್ ಸಿಂಗ್ ಸಮಿತಿ ವರದಿ

ಹರ್ಯಾಣದಲ್ಲಿ ಜಾಟ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿ ನಡೆಸಿದ ಬೃಹತ್ ಪ್ರತಿಭಟನೆಯ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿರುವುದನ್ನು ಪ್ರಕಾಶ್ ಸಿಂಗ್ ಸಮಿತಿ ವರದಿ ದೃಢಪಡಿಸಿದೆ.

ಚಂಡೀಗಢ: ಹರ್ಯಾಣದಲ್ಲಿ ಜಾಟ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿ ನಡೆಸಿದ ಬೃಹತ್ ಪ್ರತಿಭಟನೆಯ ವೇಳೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಪ್ರಕಾಶ್ ಸಿಂಗ್ ಸಮಿತಿ ವರದಿ ದೃಢಪಡಿಸಿದೆ.
ಜಾಟ್ ಸಮುದಾಯದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರಗಳ ಬಗ್ಗೆ ತನಿಖೆ ನಡೆಸುತ್ತಿರುವ ಪ್ರಕಾಶ್ ಸಿಂಗ್ ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ದೃಢಪಡಿಸಿದೆ. ಹಿಂಸಾಚಾರ ನಡೆದ ಸಂದರ್ಭದಲ್ಲಿ ಮುರ್ಥಾಲ್‌ ನಲ್ಲಿ ಹಲವು ಮಹಿಳೆಯರನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.
ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಮುರ್ಥಾಲ್ ನಲ್ಲಿರುವ ಡಾಬಾದಲ್ಲಿ ಆಶ್ರಯ ನೀಡಲಾಯಿತು.  ಈ ವೇಳೆ ಹಲವು ಮಹಿಳೆಯರ ವಸ್ತ್ರಗಳು ಸಹ ಹರಿದುಹೋಗಿದ್ದರಿಂದ ವಸ್ತ್ರಗಳನ್ನು ನೀಡಿ ಮನೆಗೆ ತಲುಪಿಸಲಾಯಿತು ಎಂದು ಡಾಬಾ ಮಾಲಿಕರ ಹೇಳಿಕೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸತತ 9 ದಿನಗಳು ನಡೆದ ಜಾಟ್ ಪ್ರತಿಭಟನೆಯ ಸಂದರ್ಭದಲ್ಲಿ 10 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿತ್ತು. ಅತ್ಯಾಚಾರ ಪ್ರಕರಣಗಳೂ ಸೇರಿದಂತೆ ಹಿಂಸಾಚಾರ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಪ್ರಕಾಶ್ ಸಿಂಗ್ ಸಮಿತಿಯನ್ನು ರಚಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT