ಮೃತದೇಹ ಸಾಗಿಸುತ್ತಿರುವ ಯುವಕರು 
ದೇಶ

ಬೈಕ್ ನಲ್ಲಿ ಮಹಿಳೆ ಮೃತದೇಹ ಸಾಗಿಸಿದ ಇಬ್ಬರು ಯುವಕರು!

ಇಬ್ಬರು ಯುವಕರು ಮರಣೋತ್ತರ ಪರೀಕ್ಷೆಯ ನಂತರ ಮಹಿಳೆಯ ಮೃತದೇಹವನ್ನು ಬೈಕ್ ನಲ್ಲಿ ತೆಗೆದುಕೊಂಡು ಹೋಗುತ್ತಿರುವ...

ನಬರಂಗಪುರ್: ಇಬ್ಬರು ಯುವಕರು ಮರಣೋತ್ತರ ಪರೀಕ್ಷೆಯ ನಂತರ ಮಹಿಳೆಯ ಮೃತದೇಹವನ್ನು ಬೈಕ್ ನಲ್ಲಿ ತೆಗೆದುಕೊಂಡು ಹೋಗುತ್ತಿರುವ ಆಘಾತಕಾರಿ ಘಟನೆ ಒಡಿಶಾದ ನಬರಂಗಪುರ್ ಜಿಲ್ಲೆಯ ಜಾರಿಗಾಂವ್ ಬ್ಲಾಕ್ ನಲ್ಲಿ ನಡೆದಿದೆ.
ಭರಮುಂಡಾ ಗ್ರಾಮದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಮೃತ ದೇವನ್ನು ಜಾರಿಗಾಂವ್ ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿತ್ತು. 
ಮರಣೋತ್ತರ ಪರೀಕ್ಷೆಯ ಬಳಿಕ ಇಬ್ಬರು ಯುವಕರು ಪ್ಲಾಸ್ಟಿಕ್ ನಿಂದ ಸುತ್ತಿದ ಮಹಿಳೆಯ ಮೃತದೇಹವನ್ನು ಬೈಕ್ ನ ಹಿಂಬದಿ ಕಟ್ಟಿಕೊಂಡು ತಮ್ಮ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಬಡತನ ಅಥವಾ ವಾಹನಗಳ ಕೊರತೆಯ ಹಿನ್ನೆಲೆಯಲ್ಲಿ ಯುವಕರು ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಘಟನೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ನಬರಂಗಪುರ್ ಜಿಲ್ಲಾಧಿಕಾರಿ ರಶ್ಮಿತಾ ಪಾಂಡ ಅವರು, ಆ ಪ್ರದೇಶದಲ್ಲಿ ಮೃತದೇಹ ತೆಗೆದುಕೊಂಡು ಹೋಗಲು ವಾಹನಗಳ ಸೌಲಭ್ಯ ಇದೆ. ಜಾರಿಗಾಂವ್ ನಿಂದ 20 ಕಿ.ಮೀ ದೂರದಲ್ಲಿರುವ ಉಮರಕೋಟ್ ನಲ್ಲಿ ಮೃತದೇಹ ಸಾಗಿಸಲು ಎರಡು ವಾಹನಗಳಿವೆ. ಆದರೆ ಅವರು ಏಕೆ ಹಾಗೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!