ಕೋಲ್ಕತಾದಲ್ಲಿ ಗ್ಯಾಂಗ್ ರೇಪ್ (ಸಾಂದರ್ಭಿಕ ಚಿತ್ರ) 
ದೇಶ

ಕೋಲ್ಕತಾ: ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

ದಾರಿ ಕೇಳಿದ ಯುವತಿಯೊಬ್ಬಳನ್ನು ಅಪಹರಿಸಿದ ಮೂವರು ದುಷ್ಕರ್ಮಿಗಳು ಚಲಿಸುತ್ತಿದ್ದ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋಲ್ಕತಾದಲ್ಲಿ ನಡೆದಿದೆ...

ಕೋಲ್ಕತಾ: ದಾರಿ ಕೇಳಿದ ಯುವತಿಯೊಬ್ಬಳನ್ನು ಅಪಹರಿಸಿದ ಮೂವರು ದುಷ್ಕರ್ಮಿಗಳು ಚಲಿಸುತ್ತಿದ್ದ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋಲ್ಕತಾದಲ್ಲಿ ನಡೆದಿದೆ.

ಕೋಲ್ಕತಾದ ಜನನಿಭಿಡ ಪ್ರದೇಶವಾದ ಸಾಲ್ಟ್ ಲೇಕ್ ಬಳಿ ಈ ಘಟನೆ ನಡೆದಿದ್ದು, ಇತ್ತೀಚೆಗಷ್ಟೇ ನಗರಕ್ಕೆ ಆಗಮಿಸಿದ್ದ ಯುವತಿ ಈಶಾನ್ಯ ಕೋಲ್ಕತಾದ ಬಗ್ವತಿ ಪ್ರದೇಶದಲ್ಲಿ  ಉಳಿದುಕೊಂಡಿದ್ದಳು. ಸ್ಥಳೀಯ ರೆಸ್ಟೋರೆಂಟ್ ಗೆ ಹೋಗಿದ್ದ ಯುವತಿಗೆ ಅಲ್ಲಿಂದ ವಾಪಸ್ ಆಗಲು ದಾರಿ ತೋಚದೇ ಸಾಲ್ಟ್ ಲೇಕ್ ಬಳಿ ಕಾರಿನ ಬಳಿ ನಿಂತಿದ್ದ ಈ ಮೂವರನ್ನು ದಾರಿ  ಕೇಳಿದ್ದಾಳೆ. ಇದನ್ನೇ ನೆಪಮಾಡಿಕೊಂಡ ದುಷ್ಕರ್ಮಿಗಳು ಆಕೆಯನ್ನು ಡ್ರಾಪ್ ಮಾಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕವಾಗಿ ಅತ್ಯಾಚಾರ  ಮಾಡಿದ್ದಾರೆ.

ಬಳಿಕ ದುಷ್ಕರ್ಮಿಗಳು ಸೆಕ್ಟರ್ V ಪ್ರದೇಶದಲ್ಲಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದು, ಯುವತಿಯನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಸ್ತುತ ಸೆಕ್ಷನ್ 376 ಜಿ  (ಸಾಮೂಹಿಕ ಅತ್ಯಾರದ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಬಿಢಾನಗರ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಪ್ರಸ್ತುತ ಯುವತಿ ಸ್ಥಿತಿ ಸ್ಥಿರವಾಗಿದ್ದ ಸರ್ಕಾರಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ