ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ 
ದೇಶ

ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಭಯೋತ್ಪಾದನೆ ಆರೋಪ ಆತಂಕಕಾರಿ ವಿಷಯ: ಕಾನೂನು ಸಚಿವ ಡಿವಿಎಸ್

ಭಯೋತ್ಪಾದನೆ ಕುರಿತಾಗಿ ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಪ್ರಕರಣ ದಾಖಲಾಗುತ್ತಿರುವ ಘಟನೆಗಳ ಬಗ್ಗೆ ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಅಲೀಘರ್: ಭಯೋತ್ಪಾದನೆ ಕುರಿತಾಗಿ ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಪ್ರಕರಣ ದಾಖಲಾಗುತ್ತಿರುವ ಘಟನೆಗಳ ಬಗ್ಗೆ ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಎರಡನೇ ವರ್ಷಾಚರಣೆ ಅಂಗವಾಗಿ ಉತ್ತರ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದ್ದ  ವಿಕಾಸ್ ಪರ್ವ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸದಾನಂದ ಗೌಡ, ಮುಸ್ಲಿಂ ಯುವಕರ ವಿರುದ್ಧ ಭಯೋತ್ಪಾದನೆ ಕುರಿತು ಸುಳ್ಳು ಪ್ರಕರಣ ದಾಖಲಿಸುತ್ತಿರುವ ಘಟನೆಗಳ ಬಗ್ಗೆ ಗಮನ ಹರಿಸಲು ಕಾನೂನು ಸುಧಾರಣೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.
ಭಯೋತ್ಪಾದನೆ ಕುರಿತಾಗಿ ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಪ್ರಕರಣಗಳು ದಾಖಲಾಗುತ್ತಿರುವುದು ಹಾಗೂ ಅವರನ್ನು ಅಮಾಯಕರೆಂದು ಸಾಬೀತಾದ ನಂತರ ಆರೋಪಮುಕ್ತರನ್ನಾಗಿ ಬಿಡುಗಡೆ ಮಾಡಲಾಗುತ್ತಿರುವ ಘಟನೆಗಳು ಆತಂಕಕಾರಿ ವಿಷಯ. ಕಾನೂನು ಸಚಿವಾಲಯ ಕಾನೂನಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೇ ಕಾನೂನಿನಲ್ಲಿ ಮಾರ್ಪಾಡು ಮಾಡುವುದಕ್ಕೆ ಸಂಬಂಧಿಸಿದಂತೆ ವರದಿಗಳನ್ನು ತಯಾರಿಸಲು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT