ಮೆಹಬೂಬಾ ಮುಫ್ತಿ 
ದೇಶ

ಜಮ್ಮು-ಕಾಶ್ಮೀರ ಉಪಚುನಾವಣೆ: ಅನಂತ್ ನಾಗ್ ಕ್ಷೇತ್ರದಿಂದ ಮೆಹಬೂಬಾ ಮುಫ್ತಿ ನಾಮಪತ್ರ ಸಲ್ಲಿಕೆ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮೆಹಬೂಬಾ ಮುಫ್ತಿ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮೆಹಬೂಬಾ ಮುಫ್ತಿ, 6 ತಿಂಗಳ ಒಳಗಾಗಿ ಜಮ್ಮು-ಕಾಶ್ಮೀರ ವಿಧಾನಸಭೆಗೆ ಆಯ್ಕೆಗೊಳ್ಳಬೇಕಿದ್ದು ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಮಾಜಿ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ನಿಧನದಿಂದ ತೆರವುಗೊಂಡಿದ್ದ ಅನಂತ್ ನಾಗ್ ವಿಧಾನಸಭಾ ಕ್ಷೇತ್ರದಿಂದ ಮೆಹಬೂಬಾ ಮುಫ್ತಿ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದು ಜೂ.1 ರಂದು ನಾಮಪತ್ರ ಸಲ್ಲಿಸಿದ್ದಾರೆ. ಕಳೆದ 26 ವರ್ಷಗಳ ರಾಜಕೀಯ ಜೀವನದಲ್ಲಿ ಮೆಹಬೂಬಾ ಮಫ್ತಿ ಒಂದೇ ಒಂದು ವಿಧಾನಸಭಾ ಚುನಾವಣೆಯನ್ನು ಸೋತಿರುವ ಉದಾಹರಣೆಗಳಿಲ್ಲ.
ಈ ಹಿಂದೆ ಸಂಸದೆಯಾಗಿದ್ದ ಮೆಹಬೂಬಾ ಮುಫ್ತಿ, ಜಮ್ಮು-ಕಾಶ್ಮೀರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ 6 ತಿಂಗಳ ಒಳಗಾಗಿ ಜಮ್ಮು-ಕಾಶ್ಮೀರ ವಿಧಾನಸಭೆಗೆ ಆಯ್ಕೆಗೊಳ್ಳಬೇಕಾಗಿದೆ. 2014 ರ ವಿಧಾನಸಭಾ ಚುನಾವಣೆಯಲ್ಲಿ ಮುಫ್ತಿ ಮೊಹಮ್ಮದ್ ಸಯೀದ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 6 ,000 ಮತಗಳ ಅಂತರದಲ್ಲಿ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!