ಸಾಂದರ್ಭಿಕ ಚಿತ್ರ 
ದೇಶ

ಒಆರ್ ಒಪಿ ಜಾರಿ ವಿಳಂಬ: ನೊಂದ ನಿವೃತ್ತ ಯೋಧ ಆತ್ಮಹತ್ಯೆಗೆ ಶರಣು!

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಬೇಸತ್ತ ನಿವೃತ್ತ ಯೋಧನೋರ್ವ ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಬೇಸತ್ತ ನಿವೃತ್ತ ಯೋಧನೋರ್ವ ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹರ್ಯಾಣ ಮೂಲದ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ದೆಹಲಿ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಇದೇ ಒರ್ ಒಪಿ ಯೋಜನೆ  ಜಾರಿಗೊಳಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರಾಮ್ ಕಿಶನ್ ಗ್ರೆವಾಲ್ ಅವರು ಯೋಧರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಂದು ಪ್ರತಿಭಟನೆಗೆ ಮಣಿದಿದ್ದ ಕೇಂದ್ರ ಸರ್ಕಾರ ಕೆಲ ಮಹತ್ತರ ಬದಲಾವಣೆ ಮಾಡಿ ಯೋಜನೆ ಜಾರಿ ಮಾಡುವುದಾಗಿ ತಿಳಿಸಿತ್ತು.

ಆದರೆ ಯೋಜನೆ ಜಾರಿಯಾಗುವಲ್ಲಿ ವಿಳಬಂವಾಗುತ್ತಿರುವದರಿಂದ ಬೇಸತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ನಿನ್ನೆ ತಮ್ಮ ದೆಹಲಿ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಆತ್ಮಹತ್ಯೆ ಕುರಿತಂತೆ ಡೆತ್ ನೋಟ್ ಬರೆದಿರುವ ರಾಮ್ ಕಿಶನ್ ಗ್ರೆವಾಲ್ ಅವರು, ನನಗಿಂತಲೂ ಕೆಳಮಟ್ಟದ ಅಧಿಕಾರಿಗಳು ಹೆಚ್ಚು  ಪೆನ್ಷನ್ ಪಡೆಯುತ್ತಿದ್ದಾರೆ. ಆದರೆ ನಾನು ಮಾತ್ರ ಅದೇ ಹಳೆಯ ನಿಯಮಾನುಸಾರ ಕಡಿಮೆ ಪೆನ್ಶನ್ ಪಡೆಯುತ್ತಿದ್ದೇನೆ. ಕೇಂದ್ರ ಸರ್ಕಾರ ಭರವಸೆ ನೀಡಿತ್ತಾದರೂ ಭರವಸೆ ಈಡೇರಿಸುವಲ್ಲಿ  ವಿಫಲವಾಗಿದೆ. ನನ್ನ ಸಾವಿನ ಬಳಿಕವಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿ ರಾಮ್ ಕಿಶನ್ ಗ್ರೆವಾಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಈ ಬಗ್ಗೆ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, "ಸರ್ಕಾರ ಕೊಟ್ಟ ಮಾತಿನಂತೆ ಒರ್ ಒಪಿ ಯೋಜನೆಯ ಮೊದಲ ಕಂತಿನ ಸುಮಾರು 5, 500 ಕೋಟಿ ಹಣವನ್ನು  ಬಿಡುಗಡೆ ಮಾಡಿದೆ. ನಿವೃತ್ತ ಯೋಧರು ಫಲ ಪಡೆಯಲಿದ್ದಾರೆ ಎಂದು ಹೇಳಿದ್ದರು. ಆದರೆ ಅಷ್ಟರಲ್ಲೇ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT